ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm