ಬ್ರೇಕಿಂಗ್ ನ್ಯೂಸ್
16-05-23 07:48 pm HK News Desk ಕರ್ನಾಟಕ
ದಾವಣಗೆರೆ, ಮೇ 16 : ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಬಿಜೆಪಿ ಕೈಗೊಂಡ ತಪ್ಪು ನಿರ್ಧಾರ, ಗುಜರಾತ್ ಮಾದರಿ ಪ್ರಯೋಗ ಹಾಗೂ ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನರು ಹೇಳುತ್ತಿದ್ದರು. ಆವಗಲೇ ನಮಗೆ ಸೋಲಾಗಿಯಿತು ಎಂದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದು ಹೇಳಿದ ರೇಣುಕಾಚಾರ್ಯ, ತನ್ನ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಈ ಸೋಲು ತೀವ್ರ ಬೇಸರವನ್ನು ತಂದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ದಲಿತರಿಗೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮಾಜಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ನಾಯಕರಿದ್ದಾರೆ. ಆದರೆ ಇಂತಹ ಪ್ಲಾನ್ ಬಿಜೆಪಿಯಲ್ಲಿ ಮಾಡಲೇ ಇಲ್ಲ ಎಂದರು.
Mulsim reservation, Gujarath model adoption is the result for BJP to loose Karnataka elections slams BJP former MLA M. P. Renukacharya. Annabaghya limited for only 5 kilos is another reason for the failure he added.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm