ಬ್ರೇಕಿಂಗ್ ನ್ಯೂಸ್
20-05-23 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಈಗಾಗಲೇ ಘೋಷಿಸಿದಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತೇವೆ. ಹಿಂದೆಯೇ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಹೇಳಿದಂತೆ ನಡೆದುಕೊಂಡು ಭರವಸೆಗಳನ್ನು ಪೂರೈಸಿದ್ದೇವೆ. ನಾವು ಬಿಜೆಪಿಯವರಂತೆ ಮಾತು ತಪ್ಪುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ನರೇಂದ್ರ ಮೋದಿ ಅವರು ಮತ್ತೆ ನೋಟು ಬ್ಯಾನ್ ಮಾಡಿದ್ದಾರೆ, ಅವರು ಯಾವಾಗ ಯಾವಾಗ ಜಪಾನ್‌ಗೆ ಹೋಗುತ್ತಾರೆ ಅವಾಗೆಲ್ಲಾ ನೋಟು ಬ್ಯಾನ್ ಮಾಡಿ ಹೋಗುತ್ತಾರೆ. ಕಳೆದ ಬಾರಿ ಜಪಾನ್‌ಗೆ ಹೋಗಿದ್ದಾಗ ಆಗ 1,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿ ಹೋಗಿದ್ದರು. ಈಗ ಜಪಾನ್ ಹೋಗಿದ್ದಾರೆ. ಈಗಲೂ 2,000 ರೂಪಾಯಿ ನೋಟನ್ನು ಬ್ಯಾನ್ ಮಾಡಿ ಹೋಗಿದ್ದಾರೆ ಎಂದರು.

ಇದರರ್ಥ ಅವರಿಗೆ ಆಡಳಿತ ಅರ್ಥ ಗೊತ್ತಿಲ್ಲ. ಇದರಿಂದ ಜನರಿಗೆ ದೇಶಕ್ಕೆ ಯಾವ ಪರಿಣಾಮ ಬೀರುತ್ತದೆ ಎಂದು ಅವರಿಗೆ ಗೊತ್ತಾಗಲ್ಲ. ಜನರಿಗೆ ಅವರು ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿದ್ದಾರೆ. ಕಳೆದ ಬಾರಿಯ ಸರ್ಕಾರದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ ಇಲ್ಲಿ ನೆರೆದಿರುವರಲ್ಲಿ ಪ್ರೀತಿ ವಿಶ್ವಾಸ ತುಂಬಿದೆ ಎಂದು ಹೇಳಿದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ ಹೇಳಿದಂತೆ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ, ನಾವು ನುಡಿದಂತೆ ನಡೆಯುತ್ತೇವೆ, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಪಾನಿನ ಅಧ್ಯಕ್ಷರ ಅಡಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿ ಹಿರೋಷಿಮಾ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ. ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗೆ ಅವರ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ ಮತ್ತು ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ.
Each time PM Modi goes to Japn he will ban the notes eralier it was 1000 this time it is ban of 2000 currency notes slams Mallikarjun Kharge
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm