ಬ್ರೇಕಿಂಗ್ ನ್ಯೂಸ್
27-05-23 12:27 pm HK News Desk ಕರ್ನಾಟಕ
ಹಾಸನ, ಮೇ 27: ಸಬ್‌ಇನ್ಸ್‌ಪೆಕ್ಟರ್ ಮನೆಗೆಯೇ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ. ಕೊಣನೂರು ಪೊಲೀಸ್ ಠಾಣೆ ಪಿಎಸ್‌ಐ ಶೋಭಾ ಭರಮಕ್ಕನವರ್ ರಜೆಯ ಮೇಲೆ ಊರಿಗೆ ತೆರಳಿದ್ದರು. ಈ ವೇಳೆ ಅವರ ಬಾಡಿಗೆ ಮನೆಯ ಕಿಟಕಿ ಒಡೆದು ಸೀಮೆಎಣ್ಣೆ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಲ್ಯಾಪ್‌ಟಾಪ್, ಡ್ರೆಸ್ಸಿಂಗ್ ಟೇಬಲ್, ಬಟ್ಟೆ, ಪೀಠೋಪಕಣಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಶೋಭಾ ರಜೆ ಮುಗಿಸಿ ಶುಕ್ರವಾರ ಮನೆಗೆ ವಾಪಸಾದಾಗ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು, ಡಿವೈಎಸ್‌ಪಿ ಮುರುಳೀಧರ್ ಹಾಗೂ ವೃತ್ತ ನಿರೀಕ್ಷಕ ರಘುಪತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೋಭಾ ಭರಮಕ್ಕನವರ್ ಕಳೆದ ಮೂರುವರೆ ತಿಂಗಳ ಹಿಂದಷ್ಟೇ ಜಾವಗಲ್ ಪೊಲೀಸ್ ಠಾಣೆಯಿಂದ ಕೊಣನೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇದೀಗ ಘಟನೆ ಬಗ್ಗೆ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Hassan sub inspector Shoba house gutted with fire by miscreants, lakhs worth items burnt.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm