ಬ್ರೇಕಿಂಗ್ ನ್ಯೂಸ್
08-06-23 03:36 pm HK News Desk ಕರ್ನಾಟಕ
ಚಿತ್ರದುರ್ಗ, ಜೂ.8: ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಬಳಿ ನಡೆದಿದೆ.
ಅಪಘಾತದಲ್ಲಿ ತಮಿಳುನಾಡಿನ ತಿರುನಾಳವೇಲಿಯ ಕನಕಮಣಿ(72), ಆಕಾಶ್ (17), ಗುಜರಾತ್ ಮೂಲದ ಆ್ಯಂಬುಲೆನ್ಸ್ ಚಾಲಕ ಮೃತಪಟ್ಟಿದ್ಧಾರೆ. ಜ್ಞಾನಶೇಖರ್(51), ಮೌಳಿ ರಾಜನ್(45) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಮಿಳುನಾಡು ಮೂಲದ ಕನಕಮಣಿ ಮತ್ತು ಕುಟುಂಬಸ್ಥರು ಅಹಮದಾಬಾದ್ನಲ್ಲಿ ನೆಲೆಸಿದ್ದಾರೆ. ಕುಟುಂಬದ ಸದಸ್ಯರೊಬ್ಬರು ಅಕಾಲಿಕ ನಿಧನದಿಂದಾಗಿ ಅವರ ಮೃತದೇಹವನ್ನು ಗುಜರಾತಿನಿಂದ ತಮ್ಮ ತವರೂರಿಗೆ ಕೊಂಡೊಯ್ಯುತ್ತಿದ್ದರು.
ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಆಂಬ್ಯುಲೆನ್ಸ್ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಿರಂತರವಾಗಿ ಪ್ರಯಾಣಿಸುತ್ತಿದ್ದ ಕಾರಣ ಆ್ಯಂಬುಲೆನ್ಸ್ ಚಾಲಕ ನಿದ್ದೆಗೆ ಜಾರಿದ ಪರಿಣಾಮ ಅಪಘಾತ ಸಂಭವಿಸಿದೆ.
ವೇಗವಾಗಿ ಆ್ಯಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೀಯೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.
Three people were killed when an ambulance carrying a body to Tamil Nadu rammed into a truck parked on the national highway in Chitradurga Rural police station limits of the district on Thursday. The deceased have been identified as 72-year-old Kanakamani and 17-year-old Akash. The identity of the driver who also succumbed is yet to be ascertained. The injured — Jnanashekar and Mouli Rajan — have been shifted to the Chitradurga district government hospital.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm