ಬ್ರೇಕಿಂಗ್ ನ್ಯೂಸ್
19-06-23 07:01 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 19: ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ಪೂರೈಕೆ ಮಾಡುವುದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಆರೋಪಕ್ಕೆ ಮಾಡಿತ್ತು. ಈ ಸಂಬಂಧ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯಗಳು ಕೇಳಿದಂತೆ ಪುಗಸಟ್ಟೆ ರೇಷನ್ ಕೊಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಆಗುವುದಿಲ್ಲ. ಎಫ್‌ಸಿಐಗೆ ರೇಷನ್ ಕೊಡುವ ಕುರಿತು ತನ್ನದೇ ಆದ ಮಾನದಂಡಗಳಿವೆ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ 140 ಕೋಟಿ ಜನರ ಭವಿಷ್ಯ ನೋಡಬೇಕಿದೆ. ನಿಮ್ಮ ಕುರ್ಚಿಗಾಗಿ, ನಿಮ್ಮ ತೆವಲಿಗಾಗಿ ಉಚಿತವಾಗಿ ಕೊಟ್ಟರೆ ಹೇಗೆ? ಇದು ನಿಮಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಯಾವ ಕಾಲದಲ್ಲಿಯೂ ಉಚಿತವಾಗಿ ಯೋಜನೆ ನೀಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಬಗ್ಗೆ ಹಾಗೂ ಪ್ರಧಾನಿ ಮೋದಿ ಬಗ್ಗೆ ಮಾತನಾಡುವುದನ್ನು ಮೊದಲು ಕೈಬಿಡಬೇಕು. ಬದಲಾಗಿ ನೀವು ರಾಜ್ಯದ ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ನಾರಾಯಣಸ್ವಾಮಿ ಹೇಳಿದರು.
ನಾನು ಒಬ್ಬ ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ದೇಶಭಕ್ತ, ನಮಗೆ ಎಲ್ಲ ಸಮಸ್ಯೆಗಳನ್ನು ಎದುರಿಸಿ ದೇಶ ಕಟ್ಟುವ ಶಕ್ತಿ ಇದೆ, ಕಟ್ಟಿ ತೋರಿಸುತ್ತೇವೆ ಎಂದರು. ಇನ್ನು ಬಿಜೆಪಿ ಸರ್ಕಾರ ಬ್ರಿಟೀಷ್ ಆಡಳಿತ ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ,"ಮಧು ಬಂಗಾರಪ್ಪ ಅವರು ರಾಜಕೀಯದ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಯಬೇಕಿದೆ. ಮಾತನಾಡುವ ಮುನ್ನ ಹಿರಿಯರ ಮಾರ್ಗದರ್ಶನ ಪಡೆದು ಮಾತನಾಡಬೇಕು. ಇಲ್ಲವಾದರೆ ಈ ರಾಜಕೀಯ ವ್ಯವಸ್ಥೆಯಲ್ಲಿ ನೀವು ಮುಳುಗುತ್ತೀರಿ ಎಂದು ಟಾಂಗ್ ನೀಡಿದರು.
Minister Narayanaswamy slams Congress over Anna Bhagya scheme, says centre cannot provide it freely. BJP or Modi has never gauranteed of providing free rice.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am