ಬ್ರೇಕಿಂಗ್ ನ್ಯೂಸ್
20-06-23 07:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಮೈಸೂರು ಸಂಸದ ಪ್ರತಾಪಸಿಂಹ ಬಿ.ಎಲ್. ಸಂತೋಷ್ ಬುಟ್ಟಿಯೊಳಗಿನ ಚೇಳು. ದಿನಕ್ಕೊಂದು ಚೇಳನ್ನು ಸಂತೋಷ್ ಹೊರಗೆ ಬಿಡುತ್ತಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಎಂ.ಬಿ ಪಾಟೀಲ್ ಹರಿಹಾಯ್ದಿದ್ದಾರೆ.
ಸಂಸದ ಪ್ರತಾಪಸಿಂಹ ಅವರು ಎಂಬಿ ಪಾಟೀಲ್, ಸಿದ್ದರಾಮಯ್ಯರ ಚೇಲಾ ಎಂದು ಹೇಳಿಕೆ ನೀಡಿದ್ದಕ್ಕೆ ತಿರುಗೇಟು ನೀಡಿದ ಪಾಟೀಲ್, ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ನಾನು ಕಾಂಗ್ರೆಸ್ ಪಕ್ಷದ ಚೇಲಾ, ಬೇರೆ ಯಾರಿಗೂ ಚೇಲಾ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗಿಂತ ಮುಂಚೆ ನಾನು ಕಾಂಗ್ರೆಸ್ಗೆ ಬಂದವನು. ಆರು ಬಾರಿ ಶಾಸಕ, ಒಂದು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ. ಯಾರಿಗೂ ಚೇಲಾ ಮಾಡುವ ಅಗತ್ಯ ನನಗಿಲ್ಲ. ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವ ಇರಬೇಕು ಎಂದು ಹೇಳಿದ್ದಾರೆ.
ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ಧಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ. ಪ್ರತಾಪ್ ಸಿಂಹ ಇನಿಷಿಯೇಟಿವ್ ತೆಗೆದುಕೊಂಡು ಅಕ್ಕಿ ಕೊಡಿಸುವ ಪ್ರಯತ್ನ ಮಾಡಲಿ ಎಂದರು.
ನನ್ನ ಹೆಗಲ ಮೇಲೆ ಯಾರೂ ಬಂದೂಕು ಇಟ್ಟು ಹೊಡೆಯಬೇಕಿಲ್ಲ. ಯಾರಿಗಾದರೂ ಹೊಡೆಯಬೇಕು ಅಂದರೆ ನಾನೇ ಹೊಡೆಯುತ್ತೇನೆ. ನಾನು ವಿಜಯಪುರದವನು, ಆ ಶಕ್ತಿ ನನಗೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ಮಾಡಿದರು.
ಇಂತಹ ಮಾನಸಿಕ ಸ್ಥಿತಿಯನ್ನು ಪ್ರತಾಪ್ ಸಿಂಹ ಎಲ್ಲಿ ಕಲಿತರೋ. ಪ್ರತಾಪ್ ಸಿಂಹ ಸಂಸದ ಸ್ಥಾನ ಇನ್ನು 10 ತಿಂಗಳು ಅಷ್ಟೇ ಇದೆ. ದಿನವೆಲ್ಲ ಪ್ರತಾಪ್ ಸಿಂಹಗೆ ಉತ್ತರ ಕೊಡುತ್ತಾ ಇರಲು ಆಗಲ್ಲ. ಪ್ರತಾಪ್ ಸಿಂಹ ಮನಸ್ಥಿತಿ ಬಗ್ಗೆ ಪಾಪ ಅನಿಸುತ್ತೆ. ಎಲ್ಲ ಜಾತಿಯ ಜನರನ್ನು ಒಟ್ಟಾಗಿ ಕೊಂಡೊಯ್ಯುವ ಹಿನ್ನೆಲೆ ನಮ್ಮದು. ಎಂ.ಬಿ.ಪಾಟೀಲ್ ಬಳಿ ಇರೋದು ಚಿಲ್ಲರೆ ಖಾತೆ ಎಂದು ಹೇಳಿದ್ದಾರೆ. ಬೃಹತ್ ಕೈಗಾರಿಕೆ ಚಿಲ್ಲರೆ ಖಾತೆಯಾ ಎಂಬುದನ್ನು ಪ್ರಧಾನಿ ಬಳಿ ಕೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಪ್ರತಾಪ್ ಸಿಂಹ ವಿರುದ್ಧ ಟ್ಟೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಎಲ್ ಸಂತೋಷನ ಮೌತ್ ಪೀಸ್ ಪ್ರತಾಪ್ ಸಿಂಹ ಅವರೇ ನಮ್ಮ ಸರ್ಕಾರದ, ನಮ್ಮ ಸಿಎಂ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ನಿಮ್ಮ ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಮೈಸೂರಿನ ಸಂಸದನಾಗಿ ಜಿಲ್ಲೆಯಲ್ಲಿ ಎಷ್ಟು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ? ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣರಾದ ಬಿಎಲ್ ಸಂತೋಷ್ ಅವರನ್ನು ಟೀಕಿಸುವ ಮಿನಿಮಮ್ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದೆ.
Mysuru MP Pratap simha is a scorpion created by BL Santosh slams MB Patil.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm