ಬ್ರೇಕಿಂಗ್ ನ್ಯೂಸ್
21-06-23 12:25 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 21: ಒಂದು ತಿಂಗಳ ರಜೆ ಕೋರಿ ಪೊಲೀಸ್ ಅಧಿಕಾರಿ ಒಬ್ಬರು ತಮ್ಮ ಮೇಲಧಿಕಾರಿಗೆ ಬರೆದ ಪತ್ರಕ್ಕೆ ಸಕಾರಾತ್ಮಕ ಸ್ಪಂದನೆ ಸಿಗದೇ ಇದ್ದುದರಿಂದ ಎರಡನೇ ಬಾರಿ ಪತ್ರ ಬರೆದುದಲ್ಲದೆ, ರಜೆಯ ಅಗತ್ಯವನ್ನು ಹೇಳಿ ಮೇಲಧಿಕಾರಿಯ ಕಿರುಕುಳವನ್ನೂ ತೆರೆದಿಟ್ಟಿದ್ದಾರೆ. ಪತ್ರದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೊದಲು ಬರೆದಿದ್ದ ಪತ್ರದಲ್ಲಿ ವೈಯಕ್ತಿಕ ಕಾರಣಕ್ಕೆ ರಜೆ ಕೋರುತ್ತಿದ್ದೇನೆ ಎಂದು ಅಧಿಕಾರಿ ಉಲ್ಲೇಖಿಸಿದ್ದರು. ಎರಡನೇ ಪತ್ರದಲ್ಲಿ ಆ ಕಾರಣ ಏನೆಂದು ವಿವರಿಸಿದ್ದಲ್ಲದೆ ಮೇಲಧಿಕಾರಿಯ ಕಿರುಕುಳದ ಬಗ್ಗೆ ವಿವರ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಬಳ್ಳಾರಿಯ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿರುವುದಾಗಿ ತಿಳಿದುಬಂದಿದೆ.
ಪತ್ರದ ಸಾರಾಂಶ ಇಂತಿದೆ. ನನಗೆ 30 ದಿನಗಳ ವೈಯಕ್ತಿಕ ಕಾರಣಗಳಿಗೆ ರಜೆ ಕೋರಿದ್ದೆ. ಉಲ್ಲೇಖ-2ರ ಪ್ರಕಾರ ನೀವು 5 ದಿನಗಳ ಪರಿವರ್ತಿತ ರಜೆಯನ್ನು ಮಾತ್ರ ಮಂಜೂರು ಮಾಡಿದ್ದು, ಉಳಿದ 25 ದಿನಗಳ ರಜೆ ಮಂಜೂರು ಮಾಡಲು ತಮಗಿದ್ದ ತೊಂದರೆ, ತೊಡಕು, ಅಸಹಾಯಕತೆ ಅಥವಾ ಅನಿವಾರ್ಯತೆ ಬಗ್ಗೆ ತಿಳಿಸದೇ ಇರುವುದು ನನಗೆ ಆಶ್ಚರ್ಯ ಉಂಟುಮಾಡಿದೆ. ನೀವು ಕಣ್ತಪ್ಪಿನಿಂದ 5 ದಿನ ಪರಿವರ್ತಿತ ರಜೆ ಮಂಜೂರು ಮಾಡಿದ್ದೀರೋ ಅಥವಾ ಉದ್ದೇಶ ಪೂರ್ವಕವಾಗಿಯೇ ರಜೆಯನ್ನು ತಡೆ ಹಿಡಿದಿದ್ದೀರೋ ಅಥವಾ ನನ್ನ ಖಾತೆಯಲ್ಲಿ ರಜೆ ಇಲ್ಲವೋ, ಇದ್ಯಾವುದನ್ನೂ ಸ್ಪಷ್ಟವಾಗಿ ನಮೂದಿಸದೇ ಮತ್ತೊಮ್ಮೆ ತಾವು ತಮ್ಮ ನಿರ್ಲಕ್ಷ್ಯ ಆಡಳಿತದ ವೈಖರಿಯನ್ನು ಪ್ರದರ್ಶಿಸಿದ್ದೀರಿ ಎಂದು ನನಗೆ ಅನಿಸುತ್ತಿದೆ.
ನಾನು ವೈಯಕ್ತಿಕ ಕಾರಣಗಳಿಗಾಗಿ ರಜೆ ಕೋರಿದ್ದು, ಆ ಕಾರಣಗಳನ್ನು ವಿವರಿಸುವ ಅವಶ್ಯಕತೆ ಮತ್ತು ಅನಿವಾರ್ಯತೆ ಇಲ್ಲವೆಂದು ಈ ಹಿಂದೆ ಭಾವಿಸಿದ್ದೆ. ಆದರೆ ಈಗ ಆ ಕಾರಣಗಳನ್ನು ತಿಳಿಸುವ ಅನಿವಾರ್ಯತೆಯನ್ನು ತಾವು ಸೃಷ್ಟಿಸಿದ್ದೀರಿ. ನಿಮ್ಮ ಆಡಳಿತವು ತಾರತಮ್ಯ, ಕಿರುಕುಳ, ಸುಳ್ಳು, ಮೋಸದಿಂದ ಕೂಡಿದ್ದು, ನೀವು ನನ್ನ ಮಾನಸಿಕ ನೆಮ್ಮದಿಯನ್ನು ಸತತವಾಗಿ ಕದಡುತ್ತಾ ಬಂದಿದ್ದೀರಿ, ನಿಮ್ಮ ಈ ರೀತಿಯ ವರ್ತನೆಯು ಹೀಗೇ ಮುಂದುವರಿದು, ನಿಮ್ಮ ಅಧೀನದಲ್ಲಿ ಇದೇ ಪರಿಸ್ಥಿತಿಯಲ್ಲಿ ನಾನು ಕೆಲಸ ಮುಂದುವರಿಸಿದಲ್ಲಿ, ನಾನು ಮಾನಸಿಕ ಕ್ಷೋಭೆ ಅಥವಾ ಖಿನ್ನತೆಗೆ ಒಳಗಾಗುವ ಸಂಭವ ಇರುವುದರಿಂದ ಕೆಲಕಾಲದ ಮಟ್ಟಿಗಾದರೂ ನಿಮ್ಮ ಕಿರುಕುಳದಿಂದ ದೂರವಾಗಿ ಮನಸ್ಸಿಗೆ ಶಾಂತಿ ಸಧೃಡತೆ ಪಡೆಯುವ ಉದ್ದೇಶಕ್ಕಾಗಿ ನನಗೆ ಯೋಗ, ಧ್ಯಾನ, ಪ್ರಾರ್ಥನೆಯಂತಹ ನಮ್ಮ ಸಂಸ್ಕೃತಿಯ ಸಂಸ್ಕಾರಗಳನ್ನು ರೂಢಿಸಿಕೊಳ್ಳಲು ಅವಶ್ಯಕತೆ ಇರುವುದರಿಂದ 30 ದಿನಗಳ ರಜೆ ಕೇಳಿದ್ದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ಸಂಘರ್ಷಕ್ಕೆ ಆಸ್ಪದವಿಲ್ಲದಂತೆ ಮತ್ತು ನಿಮ್ಮ ಕಿರುಕುಳವನ್ನು ನಿಭಾಯಿಸಿ, ಸಾರ್ವಜನಿಕರಿಗೆ ಅನ್ಯಾಯವಾಗದಂತೆ ನನ್ನ ಮಾನಸಿಕ ಸ್ಥಿತಿಯನ್ನು ಸ್ಥಿಮಿತದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಲು ನನಗೆ ಯೋಗ, ಧ್ಯಾನ, ಪ್ರಾರ್ಥನೆಯಂತಹ ಮಾರ್ಗೋಪಾಯಗಳ ಅವಶ್ಯಕತೆ ಇರುತ್ತದೆ. ಆದ್ದರಿಂದ ತಾವು ನನ್ನ ಖಾತೆಯಲ್ಲಿದ್ದ 30 ದಿನಗಳ ರಜೆಯನ್ನು ಮಂಜೂರು ಮಾಡಲು ಮತ್ತೊಮ್ಮೆ ಕೋರುತ್ತೇನೆ. ಒಂದು ವೇಳೆ ನೀವು ರಜೆ ಮಂಜೂರು ಮಾಡದೆ 5 ದಿನಗಳಲ್ಲೇ ಹಿಂದಿರುಗಿ ಬಂದು ಕೆಲಸ ಮಾಡಬೇಕು ಎಂಬ ಆಶಯ ಮತ್ತು ಉದ್ದೇಶ ನಿಮ್ಮದಾಗಿದ್ದರೆ, ಈ ಪತ್ರ ತಲುಪಿದ 3 ದಿನಗಳ ಒಳಗಾಗಿ ತಾವು ನನಗೆ ಜ್ಞಾಪನ ನೀಡಲು ಕೋರಲಾಗಿದೆ.
ಒತ್ತಡದ ಪರಿಸ್ಥಿತಿಯಲ್ಲಿಯೂ ನಾನು ಕರ್ತವ್ಯ ಮಾಡುವುದು ಅನಿವಾರ್ಯವಾಗಿದ್ದಲ್ಲಿ ನನ್ನ ಒತ್ತಡ ನಿಭಾಯಿಸುವಿಕೆ ಮಿತಿ ಮೀರಿಹೋದಲ್ಲಿ ಅದರಿಂದ ಸಾರ್ವಜನಿಕರಿಗೆ ಅಥವಾ ಅಧೀನ ಸಿಬ್ಬಂದಿಗಾಗಲಿ ಅಥವಾ ನಿಮ್ಮೊಂದಿಗಾಗಲಿ, ಅವಘಡಗಳು, ಅಚಾತುರ್ಯಗಳು ನಡೆದರೆ ತಮ್ಮದೇ ಜವಾಬ್ದಾರಿ ಎಂದು ಭಾವಿಸಿ ಎಲ್ಲ ಜವಾಬ್ದಾರಿಗಳನ್ನು ತಾವು ಹೊತ್ತುಕೊಂಡಲ್ಲಿ ನಾನು ನಿಮ್ಮ ಒತ್ತಡದ ನಡುವೆಯೂ ಕೆಲಸ ಮಾಡಬಲ್ಲೆ. ಯಾವುದೇ ಅಚಾತುರ್ಯಕ್ಕೆ ಅವಘಡಗಳಿಗೆ ನಾನು ಹೊಣೆಗಾರನಾಗಲಾರೆ. ಆದ್ದರಿಂದ ತಮ್ಮ ನಿರ್ಧಾರವನ್ನು ಜೂನ್ 22ರ ಒಳಗೆ ತಿಳಿಸಿದಲ್ಲಿ ಆ ಪ್ರಕಾರ ಕರ್ತವ್ಯಕ್ಕೆ ಬರುತ್ತೇನೆ. ಇಲ್ಲವಾದಲ್ಲಿ ನಾನು ಜೂ. 19ರಿಂದ ರಜೆಯ ಮೇಲೆ ತೆರಳುತ್ತಿದ್ದು, ನನ್ನ ಉಲ್ಲೇಖಿತ-1ರ ಮನವಿಯಂತೆ ನನಗೆ 30 ದಿನಗಳ ರಜೆ ಮಂಜೂರು ಮಾಡುತ್ತೀರಿ ಎಂಬ ನಂಬಿಕೆಯ ಮೇಲೆ ಹೊರಡುತ್ತಿದ್ದೇನೆ.
ಒಂದು ತಿಂಗಳ ನಂತರ ಸದೃಢ ಮನಸ್ಸಿನೊಂದಿಗೆ ನಿಮ್ಮ ಒತ್ತಡ, ಕಿರುಕುಳವನ್ನು ನಿಭಾಯಿಸುವ ಶಾಂತಿ ಮಂತ್ರವನ್ನು ಕಲಿತು ಬರುವ ವಿಶ್ವಾಸದಲ್ಲಿದ್ದೇನೆ. ಇದನೆಲ್ಲ ಕಲಿತರೂ ಮತ್ತೊಮ್ಮೆ ಕಷ್ಟವಾದಲ್ಲಿ ಮುಂದಿನ ಕಾರ್ಯಕ್ರಮ ಕಾಲಾಯ ತಸ್ಮೈ ನಮಃ ಎಂದು ಪತ್ರವನ್ನು ಬರೆದಿದ್ದಾರೆ. ಇದೀಗ ಈ ಪತ್ರ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
DYSP writes letter for leave alleging torture and pressure of SP Ranjith kumar Bandaru of Ballari
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm