ಬ್ರೇಕಿಂಗ್ ನ್ಯೂಸ್
23-06-23 04:13 pm HK News Desk ಕರ್ನಾಟಕ
ಹಿರಿಯೂರು, ಜೂನ್ 23: ಹಿರಿಯೂರು ತಾಲೂಕಿನ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 9 ದನಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಎನ್‌ಎಚ್-4 ರಸ್ತೆಯ ಕೆಆರ್ ಹಳ್ಳಿ ಗೇಟ್ ಬಳಿ ಇರುವ ಬೈನರಿ ಗಾರ್ಮೆಂಟ್ಸ್ ಸಮೀಪ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಈಚರ್ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 10 ದನಗಳ ಪೈಕಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. 2 ದನಗಳು ಗಂಭೀರವಾಗಿ ಗಾಯಗೊಂಡಿದ್ದವು. ಆದರೆ, ಅವು ಕೂಡ ಈಗ ಸಾವನ್ನಪ್ಪಿದ್ದು, ಒಂದು ಗೋವು ಮಾತ್ರ ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಹರಿಯಾಣ ಮೂಲದ 7 ಜನರ ತಂಡವೊಂದು ಗೋವುಗಳನ್ನು ಹಿಡಿದು ಟೆಂಪೋಗೆ ತುಂಬಿಕೊಂಡು ಹೋಗುತ್ತಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪದೇ ಪದೇ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿದ್ದು, ಈ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
Chitradurga 9 cattle killed in spot after truck accident near hiriyur.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm