ಬ್ರೇಕಿಂಗ್ ನ್ಯೂಸ್
24-06-23 02:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಆರ್. ಅಶೋಕ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಇದ್ದಾರೆ. ಸೋಮಣ್ಣ ಹೇಳಿಕೆ ಬಗ್ಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ. ಸದ್ಯಕ್ಕೆ ನಳಿನ್ ಕುಮಾರ್ರನ್ನು ಅಧ್ಯಕ್ಷ ಸ್ಥಾನದಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಲೋಕಸಭೆ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ, ದೆಹಲಿ ನಾಯಕರು ಅಂಗೀಕಾರ ಮಾಡಬೇಕಲ್ವಾ? ಲೋಕಸಭೆ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಅಶೋಕ್ ಹೇಳಿದ್ದಾರೆ.
ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಎಂದರು. ನಂತರ ಕಾಂಗ್ರೆಸ್ ಬಗ್ಗೆ ಕಿಡಿಕಾರಿದ ಅವರು, 'ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು ಎಂದು ಅಶೋಕ್ ಹೇಳೀದರು.
ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಅಶೋಕ್ ಹೇಳಿದರು.
R Ashok says no possibilities of removing Nalin Kateel from State President post in BJP. Rumors spread stating Nalin Kateel has resigned the post but later BJP has clarified it to be fake.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm