ಬ್ರೇಕಿಂಗ್ ನ್ಯೂಸ್
28-06-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಪುನರ್ ತನಿಖೆ ಮಾಡಲಿದೆ ಎಂಬ ವರದಿಗಳ ನಡುವೆಯೇ, ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ಮಾಡಲಾಗುತ್ತೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಕಟಕಿಯಾಡಿದೆ.
ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಅಂದಿನ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಸರ್ವ ಪ್ರಯತ್ನ ಮಾಡಿತ್ತು. ಹಗರಣ ಮುಚ್ಚಿ ಹಾಕಲು ಯಶಸ್ವಿಯೂ ಆಗಿತ್ತು. ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ, ನಳಿನ್ ಕಟೀಲ್ ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಪ್ರಶ್ನೆ ಮಾಡಿದೆ.

ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಶಾಮೀಲಾತಿ ಇದೆಯೆಂದು ಈ ಹಿಂದೆ ಕಾಂಗ್ರೆಸ್ ರಾಜ್ಯ ವಕ್ತಾರ ಕೆ.ಲಕ್ಷ್ಮಣ್ ಆರೋಪ ಮಾಡಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಳ್ಳ ಹಿಡಿದಾಗ ಈ ಪ್ರಶ್ನೆ ಮಾಡಿದ್ದರು. ಆದರೆ ತನಿಖೆಯನ್ನು ಸಿಐಡಿ ತಂಡ ಅರ್ಧಕ್ಕೆ ಸ್ಥಗಿತಗೊಳಿಸಿತ್ತು. ಪ್ರಕರಣದ ಬಗ್ಗೆ ಚಾರ್ಜ್ ಶೀಟನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರಲಿಲ್ಲ. ಆನಂತರ, ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮರು ತನಿಖೆಗೆ ಬೆಂಗಳೂರು ಕಮಿಷನರ್ ಡಿಜಿಪಿಗೆ ಪತ್ರ ಬರೆದಿದ್ದು ಸಿಐಡಿ ಅಥವಾ ಎಸ್ಐಟಿ ತಂಡದಿಂದ ತನಿಖೆ ನಡೆಯೋದು ಖಾತ್ರಿಯಾಗಿದೆ.
Re investigation of Bitcoin scam, Nalin Kateel is sweating, mocks Congress on Twitter. The Congress government in Karnataka on Tuesday said it will get the Bitcoin scam taken place during the previous BJP government thoroughly investigated
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm