ಬ್ರೇಕಿಂಗ್ ನ್ಯೂಸ್
29-06-23 05:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಕೆಆರ್ ಪುರ ತಹಶೀಲ್ದಾರ್, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ.
ಬೆಂಗಳೂರು ಸೇರಿ ಅಜಿತ್ಗೆ ಸೇರಿದ 12 ಕಡೆ ಆಸ್ತಿ, ಮನೆಗಳಿಗೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಶೋಧ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಅಪಾರ ಪ್ರಮಾಣದ ಆಸ್ತಿ ಗಳಿಸಿರುವುದು ಮತ್ತು ದಾಳಿ ವೇಳೆ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದ್ದರಿಂದ ಅಜಿತ್ ರೈ ಅವರನ್ನು ಲೋಕಾಯುಕ್ತ ಬಂಧಿಸಿದೆ.
ಅಜಿತ್ ರೈ ಅವರಿಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ವೇಳೆ 40 ಲಕ್ಷ ರೂ. ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೂಲಗಳ ಪ್ರಕಾರ ಹಾರ್ಸ್ ರೈಡಿಂಗ್ ಸ್ಕೂಲ್ ಮಾಡಲು ತಯಾರಿ ನಡೆಸುತ್ತಿದ್ದ ಅಜಿತ್ ರೈ ವರ್ಷಕ್ಕೆ ಕೋಟ್ಯಂತರ ಆಸ್ತಿ ಗಳಿಸುತ್ತಿದ್ದರು. ತಾಳ- ಮೇಳ ಆಗದಷ್ಟು ಆಸ್ತಿ ಕಂಡುಬಂದಿದ್ದರಿಂದ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನು ಪರಿಶೀಲನೆ ನಡೆಸಿ ಇಂದು ಅಜಿತ್ ರೈ ಅವರನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ನೇತೃತ್ವದಲ್ಲಿ ನಾಲ್ಕು ಕಾರುಗಳಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 4.30ರ ವೇಳೆಗೆ ಅಜಿತ್ ರೈ ಮನೆ ಮೇಲೆ ದಾಳಿ ನಡೆದಿತ್ತು. 15 ಕ್ಕೂ ಹೆಚ್ಚು ಅಧಿಕಾರಿಗಳು ಅಜಿತ್ ರೈ ವಾಕಿಂಗ್ ಹೋಗುವ ಮುನ್ನ ದಾಳಿ ಮಾಡಿದ್ದು, ಹೊರಗೆ ಹೋಗಿದ್ದರೆ ತಪ್ಪಿಸಿಕೊಳ್ಳುವ ಸಾಧ್ಯತೆ ಇತ್ತು. ಅಜಿತ್ ಮನೆಯ ಪಾರ್ಕಿಂಗ್ ನಲ್ಲಿ ಬೈಕ್ ಹಾಗೂ ಕಾರ್ ಗಳ ತಪಾಸಣೆ ನಡೆದಿದೆ. ಮನೆಯಲ್ಲಿ ಐಶಾರಾಮಿ ಕಾರು, ಜೀಪ್ ಪತ್ತೆಯಾಗಿತ್ತು. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೈಯೂರಿನಲ್ಲಿರುವ ತಾಯಿ ಮನೆ, ದೇವನಹಳ್ಳಿಯ ಇಳತ್ತೋರೆ ಎಂಬಲ್ಲಿರುವ ಮನೆ, ದೊಡ್ಡಬಳ್ಳಾಪುರದಲ್ಲಿ ಅಜಿತ್ ಗೆ ಸಂಬಂಧಿಸಿದ ಮನೆ, ಚಂದ್ರಾಲೇಔಟ್ ಮನೆಯಲ್ಲಿ ದಾಳಿ ನಡೆದಿತ್ತು.
ತಹಶಿಲ್ದಾರ್ ಅಜಿತ್ ರೈಗೆ ಆಪ್ತನಾಗಿರುವ ಬಸವೇಶ್ವರ ನಗರದ ಗೌರವ್ ಶೆಟ್ಟಿ ಮನೆಯ ಮೇಲೆಯೂ ದಾಳಿ ನಡೆದಿದ್ದು, ಬೆನಾಮಿ ಆಸ್ತಿ ಪತ್ತೆಯಾಗಿದೆ. ಇದಲ್ಲದೆ ಅಜಿತ್ ರೈ ಸಂಬಂಧಿಕರು, ಕುಟುಂಬಸ್ಥರು ಸೇರಿದಂತೆ ಆಪ್ತ ವಲಯದ ಹಲವು ಕಡೆ ದಾಳಿ ನಡೆದಿತ್ತು.

ಹಿಂದೆ ಅಮಾನತುಗೊಂಡಿದ್ದ ಅಜಿತ್ ರೈ
ಈ ಹಿಂದೆ ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸದ ಅರೋಪದಡಿ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈಯನ್ನ ಸರ್ಕಾರ 2022, ನವೆಂಬರ್ ನಲ್ಲಿ ಅಮಾನತು ಮಾಡಿತ್ತು. ಬಿಬಿಎಂಪಿ ವತಿಯಿಂದ ಮಹದೇವಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದರೂ ಇದಕ್ಕೆ ಕಾನೂನಾತ್ಮಕವಾಗಿ ತೊಡಕು ಉಂಟಾಗುತ್ತಿತ್ತು. ಪ್ರಕರಣದಲ್ಲಿ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಒತ್ತುವರಿದಾರರಿಗೆ ಸಹಕಾರ ನೀಡುವ ಮೂಲಕ ತೆರವು ಆಗದಂತೆ ನೋಡಿಕೊಂಡಿದ್ದ. ಒತ್ತುವರಿದಾರರು ನ್ಯಾಯಾಲಯಗಳಿಂದ ಸ್ಟೇ ಆದೇಶ ತರಲು ನೆರವಾಗಿದ್ದ. ಆದರೆ ತನ್ನ ಅಮಾನತು ಆದೇಶದ ವಿರುದ್ದ ಕೆಎಟಿಯಲ್ಲಿ ಪ್ರಶ್ನಿಸಿ ತಡೆ ತೆರವು ಮಾಡಿದ್ದ ಅಜಿತ್ ರೈ ಮತ್ತೆ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿ ನೇಮಕಗೊಂಡಿದ್ದ.
Mangalore K R Puram Tahsildar Puttur Based Ajith Rai arrested by Lokayukta after raid over unaccounted cash. Officials of Lokayukta on Wednesday conducted simultaneous raids on the residence and 10 other locations belonging to Ajith Rai, Tahsildar, K.R. Puram, and seized cash, movable and immovable assets which are disproportionate to his known source of income.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am