ಬ್ರೇಕಿಂಗ್ ನ್ಯೂಸ್
29-06-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣದ ಬಗ್ಗೆ ಸಿಐಡಿ ಬದಲು ವಿಶೇಷ ತನಿಖಾ ತಂಡ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಪಿಎಸ್ಐ ನೇಮಕಾತಿ ಹಗರಣ, ಬಿಟ್ ಕಾಯಿನ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಹೀಗೆ ವಿವಿಧ ರೀತಿಯ ಹಗರಣಗಳು ನಡೆದಿವೆ. ಈ ಎಲ್ಲ ಹಗರಣಗಳನ್ನು ಒಂದೇ ರೀತಿಯ ಸಮಿತಿಗೆ ವಹಿಸುವುದು ಸರಿಯಾಗುವುದಿಲ್ಲ. ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸಿದರೆ, ಒಂದು ರೀತಿ ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಆಗುತ್ತದೆ. ಹೀಗಾಗಿ “ಕೆಲವು ಹಗರಣಗಳ ತನಿಖೆಗೆ ಎಸ್‌ಐಟಿ, ಸ್ಪೆಷಲ್ ಟಾಸ್ಕ್ ಫೋರ್ಸ್, ಎಸಿಎಸ್ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಬೇಕು. ಬೇರೆ ಬೇರೆ ಹಗರಣಗಳಿಗೆ ಪ್ರತ್ಯೇಕ ತನಿಖಾ ತಂಡ ರಚನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ತೀರ್ಮಾನಿಸಲಿದ್ದಾರೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಬಹಳ ವಿಭಿನ್ನವಾಗಿ ಹಗರಣಗಳನ್ನು ಮಾಡಿದೆ. ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಕ್ಸ್‌ಪರ್ಟ್ ಬೇಕಾಗುತ್ತದೆ. ತಂತ್ರಜ್ಞಾನ ತಿಳಿದ ಅಧಿಕಾರಿಗಳ ಅವಶ್ಯಕತೆ ಇದೆ ಎಂದು ಹೇಳಿದರು.
ಬುಧವಾರ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಹಗರಣಗಳ ತನಿಖೆ ಬಗ್ಗೆ ಚರ್ಚಿಸಿದ್ದರು.
RDPR and IT/BT Minister Priyank Kharge, who has been campaigning for a probe into scams that surfaced during BJP rule, on Wednesday triggered a controversy of sorts by stating that “handing over the probe into Bitcoin scam to the CID (Criminal Investigation Department) means giving the keys of the home to the thief”.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am