ಬ್ರೇಕಿಂಗ್ ನ್ಯೂಸ್
01-07-23 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ವಿಧಾನಸಭೆ ಚುನಾವಣೆ ನಡೆದು ಎರಡು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆ ಬಿಜೆಪಿ ಪಾಲಿಗೆ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ.
ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಕಟಕಿಯಾಡಿದೆ.
ಅಲ್ಲದೆ, ಆರ್‌ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿರುವ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನು ಚುಚ್ಚಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದೆ.
👉ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
— Karnataka Congress (@INCKarnataka) July 1, 2023
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ವಾಟ್ಸಾಪ್… pic.twitter.com/z0bzup2HGU
Urgent vacancy for opposition leader in Karnataka, Congress Slams BJP on Twitter handle.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am