ಬ್ರೇಕಿಂಗ್ ನ್ಯೂಸ್
01-07-23 07:52 pm HK News Desk ಕರ್ನಾಟಕ
ಮೈಸೂರು, ಜುಲೈ 1 : ರಾಜ್ಯದಲ್ಲಿ ಒಂದು ಸಾವಿರ ಪೊಲೀಸ್ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. ಆ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಶನಿವಾರ ಮೈಸೂರಲ್ಲಿ ಮಾತಾಡಿದ ಅವರು," ಬಡ್ತಿ ನೀಡಿರುವ ಪರಿಣಾಮ ಬಹುತೇಕ ಎಸ್ ಐ ಹುದ್ದೆಗಳು ಖಾಲಿ ಬಿದ್ದಿವೆ. 1 ಸಾವಿರ ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ರಾಜ್ಯ ವಿಧಾನಸಭಾ ಚುನಾವಣೆ ವೇಳೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 2.50 ಹುದ್ದೆಗಳು ಖಾಲಿ ಇವೆ. ಈಗಾಗಲೇ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗೃಹಸಚಿವ ಜಿ ಪರಮೇಶ್ವರ ಹೇಳಿದರು.
ಪೊಲೀಸರಿಗೆ ವಾರದ ರಜೆಗೆ ಕ್ರಮ;
ಪೊಲೀಸರಿಗೆ ವಾರದ ರಜೆ ನೀಡಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಇದರಿಂದ ಅವರಿಗೆ ಮಾನಸಿಕವಾಗಿ ವಿಶ್ರಾಂತಿ ಸಿಗುತ್ತದೆ. ನಾನು ಪೊಲೀಸ್ ಅಧಿಕಾರಿಗಳ ವಾರದ ರಜೆ ಪರವಿದ್ದೇನೆ. ಇದಲ್ಲದೇ ರಾತ್ರಿ ಪಾಳಿಯದಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ಭತ್ಯೆ ನೀಡುವುದರ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಾಗುವುದು ಎಂದು ಹೇಳಿದರು.
ಸೈಬರ್ ಕ್ರೈಮ್ ಫೇಕ್ ನ್ಯೂಸ್ ಬಗ್ಗೆ ಕ್ರಮ! ;
" ರಾಜ್ಯದಲ್ಲೂ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಳವಾಗಿದೆ. ಸೈಬರ್ ಕ್ರೈಮ್ ತಡೆಯಲು ಕಾಯಕಲ್ಪ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸೈಬರ್ ವಿಭಾಗವನ್ನು ಹೆಚ್ಚು ಕ್ರಿಯಾಶೀಲಗೊಳಿಸುತ್ತೇವೆ. ಜೊತೆಗೆ ಫೇಕ್ ನ್ಯೂಸ್ ಬೇರೆ ಬೇರೆ ರೀತಿಯಲ್ಲಿ ಹಾಕುತ್ತಿದ್ದಾರೆ. ರಾಜಕೀಯವಾಗಿ, ಸಮಾಜದ ಶಾಂತಿ ಕದಡಲು ಫೇಕ್ ನ್ಯೂಸ್ ಹಾಕುತ್ತಿದ್ಧಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ '' ಎಂದರು.
Special provision on leaves for Police department, planning to increase salary of night duty police staffs says Home Minister Parameshwara.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm