ಬ್ರೇಕಿಂಗ್ ನ್ಯೂಸ್
03-07-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡಲು ಹೋಗಿದ್ದ ಕಾನ್ಸ್‌ಟೇಬಲ್ ಮೇಲೆ ಮತ್ತೊಂದು ಕಾರು ಹರಿದು ಅವರು ದುರಂತ ಅಂತ್ಯಕಂಡ ಘಟನೆ ಇಂದು ಬೆಳಗಿನ ಜಾವ ದೇವನಹಳ್ಳಿ ಹೈವೇಯ ಚಿಕ್ಕಜಾಲ ಬಳಿ ನಡೆದಿದೆ. ರಾತ್ರಿ ಪಾಳೆಯದಲ್ಲಿ ಕರ್ತವ್ಯದಲ್ಲಿದ್ದ ಸುರೇಶ್ ಮೃತರೆಂದು ತಿಳಿದುಬಂದಿದೆ.
ದೇವನಹಳ್ಳಿ ಇನ್ಸ್ಪೆಕ್ಟರ್ ಧರ್ಮೇ ಗೌಡ ಮತ್ತು ಅವರ ಜೀಪ್ ಚಾಲಕ ಸುರೇಶ್ ಚಿಕ್ಕಜಾಲ ಬಳಿ ಬಂದಾಗ ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಕಾರು ಕಂಡು ಪರಿಶೀಲನೆಗೆ ಮುಂದಾಗಿದ್ದಾರೆ. ಕಾನ್ಸ್‌ಟೆಬಲ್ ಸುರೇಶ್ ಜೀಪ್ನಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಸಮಯಕ್ಕೆ ವೇಗವಾಗಿ ಬಂದ ಇನ್ನೊಂದು ಕಾರು ಸುರೇಶ್ ಅವರಿಗೆ ಡಿಕ್ಕಿಯಾಗಿದೆ. ಬಳಿಕ ಕೆಟ್ಟು ನಿಂತಿದ್ದ ಇನ್ನೋವಾ ಕಾರಿಗೂ ಗುದ್ದಿದೆ. ಪರಿಣಾಮ ಸುರೇಶ್ ಮೃತಪಟ್ಟಿದ್ದಾರೆ. ಇನ್ಸ್ಪೆಕ್ಟರ್ಗೆ ಫೋನ್ ಕಾಲ್ ಬಂದಿದ್ದು ಮಾತನಾಡಲು ಕೊಂಚ ರಸ್ತೆಬದಿಗೆ ತೆರಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಿಂತಿದ್ದ ಕಾರಿನಲ್ಲಿ ಕುಳಿತಿದ್ದ ಚಾಲಕನ ಕೈಕಾಲುಗಳಿಗೂ ಗಂಭೀರ ಗಾಯಗಳಾಗಿವೆ.
ಅಪಘಾತವೆಸಗಿದ ಕಾರಿನಲ್ಲಿ ಮೂವರು ಯುವಕರು, ಮೂವರು ಯುವತಿಯರಿದ್ದರು. ಅವರಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೆಬಲ್ ಸುರೇಶ್ ದುರ್ಮರಣಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೈವೇಗಳಲ್ಲಿ ಪೊಲೀಸರು ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಲೈಟಿಂಗ್ ಬ್ಯಾಟರ್ನ್, ರಿಫ್ಲೆಕ್ಟ್ ಜಾಕೆಟ್ ಬಳಸಬೇಕು. ಈ ಮೂಲಕ ಅಪಘಾತಗಳನ್ನು ತಡೆಗಟ್ಟಬಹುದು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
In a tragic incident, a police constable, who was inspecting a parked vehicle on Bengaluru International Airport Road, was killed after being hit by a speeding car. The incident happened late on Sunday night. The deceased cop has been identified as Suresh, attached to Devanahalli police station.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am