ಬ್ರೇಕಿಂಗ್ ನ್ಯೂಸ್
04-07-23 02:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.
ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಪ್ಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂಧ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.
ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್‍ನೋಟ್‍ನಲ್ಲಿ ಒತ್ತಾಯಿಸಿದ್ದಾರೆ.
ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಗರ್ಲ್ ಫ್ರೆಂಡ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.
Wife Pavirta Commits suicide over husband Chethan Gowda affair with company employee in Bangalore. Woman commits suicide after knowing her husband's illicit affair. Posts death note on whatsapp status and commits suicide.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am