ಬ್ರೇಕಿಂಗ್ ನ್ಯೂಸ್
07-07-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 7: 14ನೇ ಬಾರಿ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಮಟ್ಟಿಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಹಣ ಹೊಂದಿಸುವ ಜೊತೆಯಲ್ಲೇ ಅಭಿವೃದ್ಧಿ ಕಾರ್ಯಗಳಿಗೂ ಭರಪೂರ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ಮದ್ಯದ ತೆರಿಗೆ ಏರಿಕೆ ಮಾಡಿದ್ದು ತೆರಿಗೆ ಸಂಗ್ರಹ ಗುರಿಯನ್ನೂ ಹೆಚ್ಚಿಸಿದ್ದಾರೆ. ಬಜೆಟ್ ಹೈಲೈಟ್ಸ್ ಇಂತಿದೆ.


5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು
ಅಬಕಾರಿ ತೆರಿಗೆ ಶೇ. 20ರಷ್ಟು ಹೆಚ್ಚಳ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 10ರಷ್ಟು ಏರಿಕೆ
ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ
ಬೆಂಗಳೂರಿಗೆ 45 ಸಾವಿರ ಕೋಟಿ ರೂ. ಅನುದಾನ - ಡಿಕೆಶಿ ಖಾತೆಗೆ ಬಂಪರ್!
ನಮ್ಮ ಮೆಟ್ರೋ ಹಾಗೂ ಉಪನಗರ ರೈಲು ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ
ಬೆಂಗಳೂರಿನ ಬೈಯ್ಯಪ್ಪನ ಹಳ್ಳಿಯಲ್ಲಿ ಸರ್. ಎಂ. ವಿಶ್ವೇಶ್ವರಯ್ಯ ಬಳಿ ಟರ್ಮಿನಲ್ ಬಳಿ ಮೇಲ್ಸೇತುವೆ ನಿರ್ಮಾಣ
ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ
ಹಸು, ಎತ್ತು, ಎಮ್ಮೆ ಮೃತಪಟ್ಟರೆ 10 ಸಾವಿರ ರೂ. ಪರಿಹಾರ - 'ಅನುಗ್ರಹ ಯೋಜನೆ' ಮರು ಜಾರಿ
ರೈತ ಉತ್ಪನ್ನಗಳ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ. ಮೀಸಲು
ಎಪಿಎಂಸಿ ಕಾಯ್ದೆ ವಾಪಸಾತಿಗೆ ರಾಜ್ಯ ಸರ್ಕಾರ ನಿರ್ಧಾರ
ರಾಮನಗರ, ಶಿಡ್ಲಘಟ್ಟದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ: 75 ಕೋಟಿ ರೂ. ಅನುದಾನ
ಕಾಫಿ ಟೂರಿಸಂ, ವೀಳ್ಯದೆಲೆ, ಮೈಸೂರು ಮಲ್ಲಿಗೆಗೆ ಬ್ರಾಂಡಿಂಗ್
'ಕೃಷಿ ಭಾಗ್ಯ ಯೋಜನೆ'ಗೆ ನರೇಗಾ ಅಡಿಯಲ್ಲಿ 100 ಕೋಟಿ ರೂ.
ಮೀನುಗಾರ ಮಹಿಳೆಯರಿಗೆ ನೀಡುವ ಸಾಲದ ಮಿತಿ 50 ಸಾವಿರ ರೂ.ನಿಂದ 3 ಲಕ್ಷಕ್ಕೆ ಏರಿಕೆ
ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆ ಉನ್ನತೀಕರಣ
ಕನಕಪುರ ತಾಲ್ಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು
ಮೈಸೂರು, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕಲಬುರಗಿಯಲ್ಲಿ ತಾಯಿ - ಮಗು ಆಸ್ಪತ್ರೆ ನಿರ್ಮಾಣ - 70 ಕೋಟಿ ರೂ. ವೆಚ್ಚ
ಹಿಂದಿನ ಸರ್ಕಾರದ ಪಠ್ಯ ಪರಿಷ್ಕರಣೆಗೆ ನಿರ್ಧಾರ: ಪರಿಷ್ಕರಣೆ ಮಾಡಿದ್ದ ಪಠ್ಯ ಕೈಬಿಡಲು ತೀರ್ಮಾನ
ಸರ್ಕಾರಿ, ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ 2 ಬಾರಿ ಮೊಟ್ಟೆ, ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಣೆ
1 ಲಕ್ಷದ 62 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ ಇಲಾಖೆಗೆ 1,01,000 ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಸಹಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಮಾರ್ಗಸೂಚಿ ದರ ಏರಿಕೆ ಆದರೆ ಮುದ್ರಾಂಕ & ನೋಂದಣಿ ಶುಲ್ಕ ಏರಿಕೆ ಆಗುವ ಸಾಧ್ಯತೆ
ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ 2023-24ನೇ ಸಾಲಿನಲ್ಲಿ 25 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹ ಗುರಿ
ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ
ವಾಹನಗಳ ನೋಂದಣಿ ತೆರಿಗೆ ಪರಿಷ್ಕರಣೆ ಮಾಡಲು ತೀರ್ಮಾನ
ಹೊಸ ವಾಹನಗಳ ನೋಂದಣಿ ಶುಲ್ಕ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ
Chief Minister Siddaramaiah presents the State budget on July 7, which will be the first since Congress came to power in the State following the May 10 elections. This will be his record 14th Budget. All eyes are on the budget since there is much curiosity about how Mr. Siddaramaiah will make the allocations required to fulfil the five pre-poll guarantees of Congress. It is also expected to focus on increasing revenue generation which will be crucial to fund the promises.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am