ಬ್ರೇಕಿಂಗ್ ನ್ಯೂಸ್
08-07-23 12:51 pm Bangalore Correspondent ಕರ್ನಾಟಕ
ಬೆಂಗಳೂರು, ಜು.7: ರಾಜ್ಯ ವಿಧಾನಸಭಾ ಬಜೆಟ್ ಅಧಿವೇಶನದ ವೇಳೆ ಸದನದೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ 15 ನಿಮಿಷಗಳ ಕಾಲ ಶಾಸಕರ ಆಸನದಲ್ಲಿ ಕುಳಿತು ಸದನದ ಕಲಾಪವನ್ನು ವೀಕ್ಷಣೆ ಮಾಡಿದ ಪ್ರಸಂಗ ನಡೆದಿದೆ. ಬಿಗಿ ಭದ್ರತೆಯುಳ್ಳ ವಿಧಾನಸಭೆ ಅಧಿವೇಶನಕ್ಕೆ ಅಪರಿಚಿತ ವ್ಯಕ್ತಿ ನುಗ್ಗಿದ ವಿಚಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ತನಿಖೆಗೆ ಆದೇಶ ಮಾಡಿದ್ದಾರೆ.
ವಿಧಾನಸೌಧದಲ್ಲಿ ಬಿಗಿ ಭದ್ರತೆ ಇದ್ದರೂ ತಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡು ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಶಾಸಕರ ಸೋಗಿನಲ್ಲಿ ಕುಳಿತುಕೊಂಡಿದ್ದಾನೆ. ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕುಳಿತು ಕಲಾಪ ವೀಕ್ಷಣೆ ಮಾಡಿದ್ದಾನೆ.


ಅಪರಿಚಿತ ವ್ಯಕ್ತಿ ಎಂಬುದನ್ನು ತಿಳಿದ ಶಾಸಕ ಶರಣಗೌಡ ಕಂದಕೂರು ಅವರು ವಿಧಾನಸಭೆ ಕಾರ್ಯದರ್ಶಿ ಮತ್ತು ಮಾರ್ಷಲ್ ಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್ ಗಳು ಆ ವ್ಯಕ್ತಿಯನ್ನು ಹೊರಗೆ ಕರೆದು ವಿಚಾರಿಸಿದ್ದು, ಶಾಸಕ ಅಲ್ಲ ಎಂಬುದು ತಿಳಿಯುತ್ತಲೇ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಜೆಟ್ ಮಂಡನೆಯ ಆರಂಭದಲ್ಲಿಯೇ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಮೊಳಕಾಲ್ಮೂರು ನಿವಾಸಿ ತಿಪ್ಪೇರುದ್ರ ಎಂದು ಗುರುತಿಸಲಾಗಿದೆ. ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಾಲ್ಕು ದಿನಗಳ ಮೊದಲೇ ವಿಧಾನಸಭೆ ಪ್ರವೇಶಕ್ಕೆ ಪಾಸ್ ಪಡೆದಿದ್ದ ವ್ಯಕ್ತಿ, ಶಾಸಕರೊಬ್ಬರ ಸ್ಥಾನ ಖಾಲಿಯಿದೆಯೆಂದು ಕುಳಿತಿದ್ದಾಗಿ ಹೇಳಿದ್ದಾನೆ. ಭದ್ರತಾ ಲೋಪದಿಂದ ಈ ರೀತಿ ಆಗಿದೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಯಾರೋ ಹೊಸ ಶಾಸಕ ಆಗಿರಬೇಕೆಂದು ಒಳಗೆ ಬಿಟ್ಟಿದ್ದರು. ಪೊಲೀಸರ ಲೋಪದ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ವಿಚಾರಣೆ ಆರಂಭಿಸಿದ್ದಾರೆ.
The newly elected government in the Karnataka Assembly was presenting its budget on Friday, during which an incident raised questions on the security arrangements of the Assembly. Chief Minister Siddaramaiah was presenting the budget in the assembly on Friday, during which an unknown and unauthorized person was seen sitting on the seat of an MLA. He sat on the chair for 15 minutes. However, he was later arrested. An unknown person entered the House and sat on the chair of Devdurg MLA Kariyamma.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am