ಬ್ರೇಕಿಂಗ್ ನ್ಯೂಸ್
13-07-23 01:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 13: ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರ್ಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.
ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ. ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು. ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ. ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.
JD(S) leader H.D. Kumaraswamy, who has been alleging that there is a “transfer racket” of officials in the new dispensation, on Wednesday, displayed a sheet of paper in the Assembly that he claimed mentions different “rates” for transfers of officials in a particular department.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm