ಬ್ರೇಕಿಂಗ್ ನ್ಯೂಸ್
15-07-23 04:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 15: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಗಳೂರು ಮೂಲದ ಜಯೇಶ್ ಪೂಜಾರಿ ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
ಜಯೇಶ್ ಪೂಜಾರಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು ಅಲ್ಲಿಯೇ ಕೈದಿಯಾಗಿರುವ ಉಗ್ರ ಅಫ್ಸರ್ ಪಾಶ ಜೊತೆಗೆ ಸಂಪರ್ಕ ಹೊಂದಿದ್ದ ಎಂಬ ಮಾಹಿತಿಯನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಫ್ಸರ್ ಪಾಶ 2005ರಲ್ಲಿ ಬೆಂಗಳೂರಿನ ಐಐಎಸ್ಸಿ ಕೇಂದ್ರಕ್ಕೆ ಬಾಂಬ್ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅಫ್ಸರ್ ಪಾಶ ಪಾಕಿಸ್ಥಾನ ಮೂಲದ ಲಷ್ಕರ್ ಇ- ತೈಬಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ್ದುದಲ್ಲದೆ, ಸೆರೆಸಿಕ್ಕ ಬಳಿಕ ಬೆಳಗಾವಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾನೆ.

ಸಚಿವ ನಿತಿನ್ ಗಡ್ಕರಿಯವರ ನಾಗಪುರದ ಕಚೇರಿಗೆ ಎರಡೆರಡು ಬಾರಿ ಜೀವ ಬೆದರಿಕೆ ಕರೆ ಮಾಡಿರುವುದು ಜಯೇಶ್ ಪೂಜಾರಿ, ಅಫ್ಸರ್ ಪಾಶ ಜೊತೆ ಸೇರಿ ರೂಪಿಸಿದ್ದ ಸಂಚಿನ ಭಾಗ ಎನ್ನಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕಲೆಹಾಕಲು ಮಹಾರಾಷ್ಟ್ರದ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಬೆಳಗಾವಿಯ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು ತನಿಖೆ ನಡೆಸಿದ್ದಾರೆ. ಜಯೇಶ್ ಪೂಜಾರಿ ಮೊದಲ ಬಾರಿಗೆ ಕಳೆದ ಜನವರಿ 14ರಂದು ನಾಗಪುರದ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿದ್ದು, 100 ಕೋಟಿ ರೂಪಾಯಿ ಹಫ್ತಾ ಬೇಡಿಕೆ ಇಟ್ಟಿದ್ದ. ಹಣ ಕೊಡದೇ ಇದ್ದರೆ, ಸಂಸದರ ಕಚೇರಿಯನ್ನು ಬಾಂಬಿಟ್ಟು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದ.
ಕರೆಯನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು ಹಿಂಡಲಗಾ ಜೈಲಿನಿಂದ ಕರೆ ಹೋಗಿದ್ದನ್ನು ಪತ್ತೆ ಮಾಡಿದ್ದರು. ಅಲ್ಲದೆ, ಜಯೇಶ್ ಪೂಜಾರಿಯನ್ನು ಈ ಕುರಿತ ಸಂಶಯದಿಂದ ತನಿಖೆ ನಡೆಸಿ ಮರಳಿ ಜೈಲಿಗೆ ಬಿಟ್ಟಿದ್ದರು. ಆನಂತರ, ಮಾರ್ಚ್ 21ರಂದು ನಾಗಪುರದ ಸಚಿವ ಗಡ್ಕರಿಯವರ ಜನಸಂಪರ್ಕ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು ಕರೆ ಮಾಡಿದ್ದ ವ್ಯಕ್ತಿ 10 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದ. ಕರೆಯ ಜಾಡು ಹಿಡಿದು ಬಂದ ಮಹಾರಾಷ್ಟ್ರ ಪೊಲೀಸರು ಮಾರ್ಚ್ 28ರಂದು ಜಯೇಶ್ ಪೂಜಾರಿಯನ್ನು ಕಸ್ಟಡಿಗೆ ಪಡೆದಿದ್ದಾರೆ. ತನಿಖೆ ಸಂದರ್ಭದಲ್ಲಿ ಅಫ್ಸರ್ ಪಾಶ ಜೊತೆ ಆರೋಪಿಗೆ ಲಿಂಕ್ ಇರುವುದು ಪತ್ತೆಯಾಗಿದ್ದರಿಂದ ಆ ನಿಟ್ಟಿನಲ್ಲಿ ತನಿಖೆ ಸಾಗಿದೆ. ಸದ್ಯದಲ್ಲೇ ಪ್ರಕರಣದ ಬಗ್ಗೆ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಹಾಕಲಿದ್ದಾರೆ.
Police in Maharashtra's Nagpur have found links between Jayesh Pujari, arrested for allegedly making threatening phone calls to Union Minister Nitin Gadkari earlier this year, and Afsar Pasha, who is currently in jail in Karnataka after being convicted in a Bengaluru terror attack case, an official said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am