ಬ್ರೇಕಿಂಗ್ ನ್ಯೂಸ್
17-07-23 05:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 17: ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದರಿಂದ ಬರಗಾಲ ಘೋಷಣೆ ಮಾಡುವ ಕುರಿತು ಸಚಿವ ಸಂಪುಟ ಸಭೆ ಇದೇ ವಾರದಲ್ಲಿ ನಡೆಯಲಿದ್ದು, ನಂತರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯೆ ಹೇಮಾಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಕಂದಾಯ ಸಚಿವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆಯ ಉಪ ಸಮಿತಿಯನ್ನು ರಚಿಸಲಾಗಿದೆ.
ಸಿದ್ದರಾಮಯ್ಯ ಅವರ ಸೂಚನೆಯಂತೆ ಈ ಸಮಿತಿಯು 15 ದಿನದ ಹಿಂದೆಯೇ ಸಭೆ ನಡೆಸಿದೆ. ಕಳೆದ ವಾರ ಮತ್ತೊಂದು ಸಭೆಯನ್ನು ನಡೆಸಿತ್ತು. ಈ ವಾರ ಇನ್ನೊಂದು ಸಭೆ ನಡೆಯಲಿದೆ. ವಾಡಿಕೆಗಿಂತ ಕಡಿಮೆ ಮಳೆ ಬಂದಿರುವ ಜಿಲ್ಲೆಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಈ ಹಿಂದೆಯೇ ಬರಗಾಲ ಘೋಷಣೆ ಮಾಡಬೇಕೆಂಬ ಬೇಡಿಕೆಯಿತ್ತು. ಆದರೆ ಜುಲೈ ತಿಂಗಳ 2ನೇ ವಾರ ರಾಜ್ಯದ ಕೆಲವು ಕಡೆ ಉತ್ತಮ ಮಳೆಯಾಗಿದ್ದರಿಂದ ಕಾದು ನೋಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಕೊಪ್ಪಳ, ಬೀದರ್, ಯಾದಗಿರಿ, ಕಲಬುರ್ಗಿ ಸೇರಿದಂತೆ ಮತ್ತಿತರ ಕಡೆ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮುಂದಿನ ಸಭೆಯೊಳಗೆ ಮಳೆ ಬಾರದಿದ್ದರೆ ಬರ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಅನೇಕ ಕಡೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಅಲ್ಲದೆ, ಕಳೆದ ವರ್ಷ ರಾಜ್ಯದ ಅನೇಕ ಕಡೆ ಶೇ.50ರಷ್ಟು ಬಿತ್ತನೆಯಾಗಿತ್ತು. ಈ ಬಾರಿ ಕೆಲವು ಕಡೆ ಮಾತ್ರ ಶೇ.25 ರಿಂದ ಶೇ. 23ರಷ್ಟು ಬಿತ್ತನೆ ಕಾರ್ಯ ಮುಗಿದಿದೆ ಎಂದು ಮಾಹಿತಿ ನೀಡಿದರು. ಬರಗಾಲ ಘೋಷಣೆ ಮಾಡಬೇಕಾದರೆ ಕೆಲವು ಮಾನದಂಡಗಳಿರುತ್ತವೆ. ಅದನ್ನು ಅನುಸರಿಸಿಯೇ ನಾವು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಚೆಲುವರಾಯಸ್ವಾಮಿ ಹೇಳಿದರು.
ರಾಜ್ಯದಲ್ಲಿ ಮುಂಗಾರು 10 ದಿನ ತಡವಾಗಿ ಆರಂಭವಾಗಿದೆ. ಶೇ. 36 ರಷ್ಟು ಮುಂಗಾರು ಕೊರತೆಯಾಗಿದೆ, ಕಳೆದ ಬಾರಿಗಿಂತ ಶೇ.10 ರಷ್ಟು ಕಡಿಮೆ ಬಿತ್ತನೆ ಕಾರ್ಯ ನಡೆದಿದ್ದು, ಕೃಷಿ ಚಟುವಟಿಕೆ ಉತ್ತೇಜನಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ, ಕಳಪೆ ಬಿತ್ತನೆ ಬೀಜ ಮತ್ತು ಕಳಪೆ ಔಷಧ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ.
Lack of rainfall in the state, Decision on declaring drought will be taken in this week said Minister N Cheluvaraya swamy. The committee met 15 days ago on the instructions of Siddaramaiah. Another meeting was held last week. Another meeting will be held this week. A decision will be taken on declaring districts with below normal rainfall as drought-hit, he said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am