ಬ್ರೇಕಿಂಗ್ ನ್ಯೂಸ್
21-07-23 08:37 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಇತ್ತ ಎಚ್.ಡಿ.ಕುಮಾರಸ್ವಾಮಿ ರಾಜ್ಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿಗೆ ಮುಂದಾಗಿದ್ದರೆ, ಇದಕ್ಕೆ ಹಲವು ಜೆಡಿಎಸ್ ಶಾಸಕರೇ ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ, ದೇವೇಗೌಡರ ಕುಟುಂಬದ ಒಳಗಡೆಯೇ ಮೈತ್ರಿಗೆ ವಿರೋಧ ಬಂದಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಜೆಡಿಎಸ್ ಪಕ್ಷದ 19 ಶಾಸಕರಲ್ಲಿ ಕೆಲವು ಹಿರಿಯ ಶಾಸಕರೇ ಬಿಜೆಪಿಯೊಂದಿಗೆ ಕೈಜೋಡಿಸುವ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಅಮಾನತುಗೊಂಡ ಬಿಜೆಪಿ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸುತ್ತಿರುವುದಕ್ಕೂ ಜೆಡಿಎಸ್ ಶಾಸಕರಲ್ಲಿಯೇ ವಿರೋಧ ವ್ಯಕ್ತವಾಗಿದೆ. ಮಾಜಿ ಸಚಿವ, ಮೈಸೂರು ಭಾಗದ ಪ್ರಬಲ ನಾಯಕ ಜಿ.ಟಿ.ದೇವೇಗೌಡ ಅವರು ‘ಪೇಪರ್ ಹರಿದು ಸ್ಪೀಕರ್ ಕುರ್ಚಿಯ ಮೇಲೆ ಎಸೆದದ್ದು ಅಶಿಸ್ತಿನ ವರ್ತನೆ’ ಎಂದು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರಿಬ್ಬರೂ ಸಮಾನ ಹೊಣೆಗಾರರು ಎಂದವರು ಟೀಕಿಸಿದ್ದಾರೆ.


ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ಎರಡೂ ರಾಷ್ಟ್ರೀಯ ಪಕ್ಷಗಳನ್ನು ಸಮಾನ ಅಂತರದಲ್ಲಿ ಇಡಬೇಕು ಎಂಬ ಸ್ಪಷ್ಟ ಸೂಚನೆಯನ್ನು ಜಿ.ಟಿ ದೇವೇಗೌಡರು ನೀಡಿದ್ದಾರೆ. ಪಕ್ಷದ ಬಗ್ಗೆ ನಿಷ್ಠೆ ಹೊಂದಿರುವ ಇತರರು ಕೂಡ ಇದೇ ರೀತಿಯ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೂ ಇದೇ ಭಾವನೆ ಇದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುಮಾರಸ್ವಾಮಿ ಅವರ ಇಚ್ಛೆಗೆ ಸುಮಾರು 12 ಜೆಡಿಎಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಪಕ್ಷಗಳ ಐಎನ್ಡಿಐಎ ಮೈತ್ರಿಕೂಟದ ನಾಯಕರು ಕನಿಷ್ಠ ಪಕ್ಷ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರನ್ನು ಭೇಟಿಯಾಗುವಂತೆ ಕುಮಾರಸ್ವಾಮಿ ಸೂಚಿಸಬೇಕಿತ್ತು ಎಂದು ಜೆಡಿಎಸ್ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ಮತ್ತು ಜೆಡಿಎಸ್ ದೂರು ಸಲ್ಲಿಸಿದ್ದು, ಅದರಲ್ಲಿ ಕುಮಾರಸ್ವಾಮಿ ಮೊದಲ ಸಹಿ ಹಾಕಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಐದು ವರ್ಷಗಳ ಕಾಲ ಅಧಿಕಾರ ಇಲ್ಲದೆ, ಪಕ್ಷದ ಅಸ್ತಿತ್ವ ಉಳಿಸುವುದಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಬಿಜೆಪಿ ಜೊತೆ ಹೋಗಲು ಮುಂದಾಗಿದ್ದಾರೆ. ಆದರೆ ರೇವಣ್ಣ ಕೋಮುವಾದಿ ಪಕ್ಷದ ಜೊತೆ ಸೇರಿದರೆ, ಇರುವ ಅಸ್ತಿತ್ವಕ್ಕೂ ಕುತ್ತು ಬರಬಹುದು ಅನ್ನುವ ಭಾವನೆ ಹೊಂದಿದ್ದಾರೆ. ಅಲ್ಲದೆ, ಮೈತ್ರಿ ಏರ್ಪಟ್ಟರೆ ತಮ್ಮ ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯಕ್ಕೆ ಕುತ್ತು ಬರುತ್ತಾ ಅನ್ನುವ ಭಯಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ ನೇರ ಹೋರಾಟಕ್ಕಿಳಿದರೆ, ಮುಸ್ಲಿಂ ಇತರ ಅಲ್ಪಸಂಖ್ಯಾತ ಮತಗಳು ಜೆಡಿಎಸ್ ಬಿಟ್ಟು ಹೋದಲ್ಲಿ ಹಾಸನ ಗೆಲ್ಲುವುದು ಕಷ್ಟವಾಗಬಹುದು ಎನ್ನುವ ಭೀತಿಯಲ್ಲಿ ರೇವಣ್ಣ ಇದ್ದಾರೆ. ಹೀಗಾಗಿ ಕುಮಾರಸ್ವಾಮಿ ಒಂದು ಬಗೆದರೆ, ರೇವಣ್ಣ ಇನ್ನೊಂದು ಲೆಕ್ಕ ಹಾಕುತ್ತಿದ್ದಾರೆ. ಮೈತ್ರಿ ಪರಿಣಾಮ ಜೆಡಿಎಸ್ ಪಕ್ಷವೇ ಒಡೆದು ಹೋಗಬಹುದು ಎನ್ನುವ ಭೀತಿಯೂ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಲ್ಲಿದೆ.
HD Kumaraswamy Announces His Party Will Be BJP Ally, JDS leaders G T Devegowda and Revanna unhappy over move. leader and Karnataka's former Chief Minister HD Kumaraswamy today declared that his party has decided to work together with the BJP as an opposition, in the interest of the state.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am