ಬ್ರೇಕಿಂಗ್ ನ್ಯೂಸ್
22-07-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಲಾಗಿದೆ. ಹಗರಣದ ಕುರಿತ ವರದಿಯನ್ನು ಮೂರು ತಿಂಗಳಲ್ಲಿ ನೀಡುವಂತೆ ಆಯೋಗವನ್ನು ಸರ್ಕಾರ ಕೋರಿದೆ.

2021ರ ಜನವರಿ 21ರಂದು ಪಿಎಸ್ಐಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿತ್ತು. ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ, ವಿವಿಧ ಹಂತಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಯಾರೆಲ್ಲಾ ದುರ್ಲಾಭ ಪಡೆದಿದ್ದಾರೆ ಎಂಬುದರ ಕುರಿತು ತನಿಖೆ ನಡೆಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮುಂದಿನ ದಿನಗಳಲ್ಲಿ ಪಿಎಸ್‌ಐ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕ ಹಾಗೂ ಲೋಪರಹಿತವಾಗಿ ನಡೆಸಲು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಶಿಫಾರಸು ಮಾಡುವಂತೆ ಆಯೋಗವನ್ನು ಕೋರಲಾಗಿದೆ.
ಈಗಾಗಲೇ ತನಿಖೆ ನಡೆಸಿರುವ ಸಿಐಡಿ ಹಾಗೂ ಪೊಲೀಸ್ ನೇಮಕಾತಿ ವಿಭಾಗವು ನ್ಯಾಯಾಂಗ ಆಯೋಗಕ್ಕೆ ಸಮಗ್ರ ಮಾಹಿತಿ ಮತ್ತು ದಾಖಲೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ. ಪ್ರಕರಣದಲ್ಲಿ ತನಿಖೆ ನಡೆಸಿದ್ದ ಸಿಐಡಿ ತಂಡವು ಹಲವರನ್ನು ಬಂಧಿಸಿತ್ತು. ಮತ್ತೆ ವಿಚಾರಣಾ ಆಯೋಗದಿಂದ ತನಿಖೆ ಆರಂಭಗೊಳ್ಳಲಿದೆ.
ದ್ವೇಷದ ರಾಜಕಾರಣ ; ಬೊಮ್ಮಾಯಿ
ಪಿಎಸ್ಐ ಹಗರಣವನ್ನು ಮತ್ತೆ ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್‍ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ. ಈ ಹಗರಣದಲ್ಲಿ ಕಾಂಗ್ರೆಸ್‍ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೋರ್ಟ್‍ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದಿದ್ದಾರೆ.
The Congress-led Karnataka government has constituted a one-man judicial commission to probe the allegations of a scam in the recruitment of Police Sub-Inspector (PSI) in 2021. The government has appointed Karnataka High Court retired judge B Veerappa to probe the allegations and submit the report within three months.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am