ಬ್ರೇಕಿಂಗ್ ನ್ಯೂಸ್
23-07-23 06:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 23: ನೈಸ್ ಅಕ್ರಮದ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ.
ತಾವು 'ಸತ್ಯರಾಮಯ್ಯ'ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ.
ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು.
ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ @BJP4Karnataka ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು.
ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ @siddaramaiah ನವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ 'ನಿತ್ಯ ಕಿರುಕುಳ'ವನ್ನು ಮರೆಯಲಾದೀತೆ?
ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ 'ಅಪರ ಹರಿಶ್ಚಂದ್ರ'ನ ಸರಕಾರ! ಹೌದಲ್ಲವೇ?
ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟ ಹೆಜ್ಜೆ ಇಡಿ. 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ?
ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಮಾರ್ಮಿಕ ಮಾತುಗಳಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕುಮಾರಸ್ವಾಮಿ ಚುಚ್ಚಿದ್ದಾರೆ.
ನೈಸ್ ಯೋಜನೆಗೆ ಶ್ರೀ @H_D_Devegowda ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಶ್ರೀ @DKShivakumar ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? 1/10#ಬುಲ್ಡೋಜ್_ಬೆಂಗಳೂರು #ಬುಲ್ಡೋಜ್_ಕರ್ನಾಟಕ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು.ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? 9/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!! 1/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.3/4#ಬೆಲೆ_ಏರಿಕೆ_ಗ್ಯಾರಂಟಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ??
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ?10/10
In his fresh bid to corner the Congress government in Karnataka, JD(S) leader H D Kumaraswamy asked it to take over the Bangalore-Mysore Infrastructure Corridor built and owned by Nandi Infrastructure Corridor Enterprise (NICE) and take action against “irregularities” in the project.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am