ಬ್ರೇಕಿಂಗ್ ನ್ಯೂಸ್
26-07-23 03:59 pm HK News Desk ಕರ್ನಾಟಕ
ತುಮಕೂರು, ಜುಲೈ 26: ತುಮಕೂರು ಜಿಲ್ಲೆಯ ಗೊಲ್ಲರಹಟ್ಟಿ ಗ್ರಾಮ ಅಲ್ಲಿನ ಜನರ ಮೌಢ್ಯತನಕ್ಕೆ ಕುಖ್ಯಾತಿ ಪಡೆದಿದೆ. ಹೊಸತಾಗಿ ಋತುಮತಿಯಾದವರು, ಸೂತಕ ಇದ್ದವರನ್ನು ಗ್ರಾಮದಿಂದ ಹೊರಗೆ ಇರಿಸುವಂತಹ ಅನಿಷ್ಟ ಪದ್ಧತಿ ಅಲ್ಲಿ ಚಾಲ್ತಿಯಲ್ಲಿದೆ. ಆದರೆ ಈಗ ಈ ಅನಿಷ್ಟ ಪದ್ಧತಿಯ ಕಾರಣಕ್ಕೆ ನವಜಾತ ಶಿಶುವೊಂದು ಅಸುನೀಗಿದೆ.
ಸೂತಕವು ದೇವರಿಗೆ ಆಗಲ್ಲ ಎಂದು ಬಾಣಂತಿ ಮತ್ತು ಹಸುಗೂಸನ್ನೇ ಊರಿನಿಂದ ಹೊರಗಿಟ್ಟ ಕುಟುಂಬಸ್ಥರು ಮಗುವನ್ನೇ ಕಳೆದುಕೊಂಡಿದ್ದಾರೆ. ಗೊಲ್ಲರಹಟ್ಟಿ ಗ್ರಾಮದ ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ಮೃತಪಟ್ಟಿದೆ. ಸೂತಕದ ಕಾರಣ ಮಗು ಮತ್ತು ಬಾಣಂತಿಯನ್ನು ಮಳೆ ಎಂದೂ ಲೆಕ್ಕಿಸದೆ ಊರ ಹೊರಗಿನ ಗುಡಿಸಲಿನಲ್ಲಿ ಇರಿಸಿದ್ದರು.

ಈ ನಡುವೆ, ಮಗುವಿಗೆ ಶೀತ ಹೆಚ್ಚಾಗಿದ್ದರಿಂದ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ವಿಪರೀತ ಗಾಳಿ, ಮಳೆ ಇದ್ದರೂ ಸಹ ಮಗು ಮತ್ತು ತಾಯಿಯನ್ನು ಊರ ಹೊರಗೆ ಇರಿಸಲಾಗಿತ್ತು. ಇದರಿಂದ ಮಗುವಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ವಸಂತ ಕಳೆದ ತಿಂಗಳು ಜೂನ್ 22ರಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಏಳು ತಿಂಗಳಲ್ಲಿ ಹೆರಿಗೆ ಆಗಿದ್ದರಿಂದ ಒಂದು ಮಗು ಸಾವನ್ನಪ್ಪಿದ್ದರೆ, ಇನ್ನೊಂದು ಮಗು ಬದುಕುಳಿದಿತ್ತು. ಮಗುವನ್ನು 22 ದಿನ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿಟ್ಟು ಬಳಿಕ ಬಿಟ್ಟು ಕೊಡಲಾಗಿತ್ತು. ಜು.14 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆಸ್ಪತ್ರೆಯಿಂದ ಬರುತ್ತಿದ್ದಂತೆ ಕುಟುಂಬಸ್ಥರು ತಾಯಿ ಮತ್ತು ಮಗುವನ್ನು ಊರಾಚೆ ಇರುವ ಗುಡಿಸಲಿಗೆ ರವಾನೆ ಮಾಡಿದ್ದರು. ಹೀಗಾಗಿ ಬಾಣಂತಿ ಮತ್ತು ಹಸುಗೂಸು ಉಸಿರುಗಟ್ಟಿಸುವ ಸಣ್ಣ ಗುಡಿಸಲಿನಲ್ಲೇ ಹಗಲು, ರಾತ್ರಿ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ವಿಪರೀತ ಮಳೆ, ಗಾಳಿಯಿಂದಾಗಿ ಮಗು ಅನಾರೋಗ್ಯಕೀಡಾಗಿ ಪ್ರಾಣಬಿಟ್ಟಿದ್ದು ಗ್ರಾಮಸ್ಥರ ಮೌಢ್ಯಕ್ಕೆ ಜನರು ಅಮಾಯಕ ಶಿಶು ಪ್ರಾಣ ಬಿಡುವಂತಾಗಿದೆ..
Tumkur Superstitious beliefs, Mother loses new born baby due to heavy wind and rains after daughter in law pushed to live in hut due to Superstitious beliefs of death.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am