ಬ್ರೇಕಿಂಗ್ ನ್ಯೂಸ್
28-07-23 10:35 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬ ಸದಸ್ಯರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ಅವರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಸಂಜೆ ವೇಳೆಗೆ ತಪ್ಪೊಪ್ಪಿಗೆ ನೀಡಿದ ಕಾರಣ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಮಾಡಿದ ಆರೋಪ ವಿಚಾರ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿದೆ. '' ಕಾಂಗ್ರೆಸ್, ಮಕ್ಕಳಾಟವನ್ನು ರಾಜಕೀಯದ ಕಳ್ಳಾಟಕ್ಕೆ ಬಳಸಿಕೊಳ್ಳಲು ಬಿಜೆಪಿ ಉಪ್ಪು, ಖಾರ, ಮಸಾಲೆ ಬೆರೆಸುತ್ತಿದೆ,'' ಎಂದು ಟ್ವೀಟ್ ಮಾಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರೀ ಟ್ವೀಟ್ ಮಾಡಿದ್ದ ಶಕುಂತಲಾ, '' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ, ಸೊಸೆ ವಿಡಿಯೊ ಮಾಡಿದ್ದರೆ ಮಕ್ಕಳಾಟ ಎಂದು ಒಪ್ಕೋತಿರಾ '' ಎಂದು ಟ್ವೀಟ್ ಹಾಕಿದ್ದರು.
ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬುವವರು ನೀಡಿದ ದೂರಿನ ಅನ್ವಯ ಮಹಿಳೆಯರ ಘನತೆಗೆ ಉದ್ದೇಶಪೂರ್ವಕವಾಗಿ ಧಕ್ಕೆ ಉಂಟು ಮಾಡಿದ ಆರೋಪ ಸಂಬಂಧ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಶುಕ್ರವಾರ ತುಮಕೂರಿಗೆ ತೆರಳಿದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ತನಿಖಾ ತಂಡ ಆರೋಪಿ ಶಕುಂತಲಾ ಅವರನ್ನು ಬಂಧಿಸಿ ಕರೆತರಲಾಗಿತ್ತು. ಆರೋಪಿ ಹೇಳಿಕೆ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆರೋಪಿ ನ್ಯಾಯಾಲಯದಲ್ಲಿ ಜಾಮೀನು ಪಡೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತೆ ತಪ್ಪೊಪ್ಪಿಗೆ ಹೇಳಿಕೆ
''ಮುಖ್ಯಮಂತ್ರಿಗಳ ಕುಟುಂಬದ ಮಹಿಳಾ ಸದಸ್ಯರ ಕುರಿತು ಟ್ವೀಟ್ ಮಾಡಿ ತಪ್ಪು ಮಾಡಿದೆ,'' ಎಂದು ಆರೋಪಿ ಶಕುಂತಲಾ ಹೇಳಿಕೆ ದಾಖಲಿಸಿದ್ದಾರೆ. ಜತೆಗೆ ''ರಾಜಕೀಯ ನಾಯಕರ ಕುಟುಂಬ ಸದಸ್ಯರ ಕುರಿತು ಮುಂದಿನ ದಿನಗಳಲ್ಲಿಅವರ ಗೌರವಕ್ಕೆ ಧಕ್ಕೆ ತರುವಂತೆ ಪೋಸ್ಟ್ ಮಾಡುವುದಿಲ್ಲ. ಈಗ ಮಾಡಿರುವ ಪೋಸ್ಟ್ ಅಳಿಸಿ ಹಾಕುತ್ತೇನೆ '' ಎಂದು ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Derogatory post about CM Siddaramaiah and family, BJP activist Shakuntala released after apology. Amid the raging Udupi college row, the Bengaluru Police have arrested a BJP woman worker identified as Shakunthala HS for posting derogatory comments on social media against Karnataka Chief Minister Siddaramaiah on Twitter. She was later released on station bail.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am