ಬ್ರೇಕಿಂಗ್ ನ್ಯೂಸ್
03-08-23 07:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ರಾಜ್ಯಸಭೆ ವಿರೋಧಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ, 'ಶತ ಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ' ಎಂದು ಮಾರ್ಮಿಕ ಉತ್ತರ ನೀಡಿದ್ದಾರೆ.
ಬಿಜೆಪಿ ಪ್ರತಿಭಟನೆ ವೇಳೆ ಖರ್ಗೆ ಅವರ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದ ಜ್ಞಾನೇಂದ್ರ, ಕಲ್ಯಾಣ ಕರ್ನಾಟಕ ಭಾಗದವರು ಮರದ ನೆರಳಿಲ್ಲದೆ ಸುಟ್ಟು ಕರುಕಲಾಗಿರುತ್ತಾರೆ, ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆ ಎಂದು ಅವಹೇಳನ ಮಾಡಿದ್ದರು. ಈ ಹೇಳಿಕೆ ವಿರುದ್ದ ಕೆರಳಿ ಕೆಂಡವಾದ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ವಿರುದ್ಧ ಕಟು ಮಾತುಗಳಿಂದ ಖಂಡಿಸಿದ್ದರು. ಜೊತೆಗೆ, ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು ಎಂದು ಟ್ವೀಟ್ ಮಾಡಿದ್ದಾರೆ. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.'
ಶತ ಶತಮಾನಗಳಿಂದ ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ'. 'ಮನುಸ್ಮೃತಿ ಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ ದಲಿತರ ರಾಜಕೀಯ ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ'. 'ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿ ಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ' ಎಂದು ಹೇಳಿದ್ದಾರೆ.
,@JnanendraAraga ಅವರೇ,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 2, 2023
ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ…
Rural Development and Panchayat Raj Minister Priyank Kharge on Saturday hit back at former Home Minister Araga Jnanendra for his remarks on Leader of Opposition in Rajya Sabha and Congress national president Mallikarjun Kharge, saying that the skin of those who have been exploited for centuries in the name of varnashrama and eaten in the sweat of the toiling people may be white, while those who work with self-respect and eat will be burnt in the sun.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am