ಬ್ರೇಕಿಂಗ್ ನ್ಯೂಸ್
08-08-23 07:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡುವೆ ಟ್ವೀಟ್ ವಾರ್ ಜೋರಾಗಿದೆ. ಸೋಮವಾರ ಮಧ್ಯರಾತ್ರಿ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ನಕಲಿ ಸಂವಿಧಾನ ತಜ್ಞ ಎಂದು ಕರೆದಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಅವರು ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಈ ಪತ್ರವೇ ನಕಲಿ ಎಂದು ಹೇಳಿದ್ದರು. ಇದಕ್ಕೆ ಆಕ್ರೋಶದಿಂದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಮಾನಗೇಡಿ ಕೃತ್ಯಗಳನ್ನು ಸಮರ್ಥಿಸುವ ಲಜ್ಜೆಗೇಡಿ ಮುಖ್ಯಮಂತ್ರಿ ಎಂದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ಮಾನಸಿಕ ಅಸ್ವಸ್ಥತೆಯಿಂದ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
ಸಿದ್ದರಾಮಯ್ಯ ಅವರ ಮೇಲೆ ಎಚ್.ಡಿ.ಕೆ. ಮಾಡಿದ ವಾಗ್ದಾಳಿ ಏನೇನು?
ಇದಕ್ಕೆ ಸಿದ್ದರಾಮಯ್ಯ ಅವರು ನೀಡಿದ ಪ್ರತಿಕ್ರಿಯೆ ಏನು?
ಸನ್ಮಾನ್ಯ @hd_kumaraswamy ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax #CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2023
ಸನ್ಮಾನ್ಯ @hd_kumaraswamy ಅವರೇ,
— Siddaramaiah (@siddaramaiah) August 8, 2023
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.
ಇನ್ನು ನೀವು… https://t.co/dXtacPzEHE
Tweet War Between Siddaramaiah and HD Kumaraswamy Continues.
06-09-25 07:26 pm
Bangalore Correspondent
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 07:45 pm
HK News Desk
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm