ಬ್ರೇಕಿಂಗ್ ನ್ಯೂಸ್
14-08-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್14: ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕೇಸ್ಗೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ನ ಶಾಲೆಗೆ ಬೀಗ ಹಾಕಲಾಗಿದೆ. ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿರುವ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.
ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಸದ್ಯ ಮಕ್ಕಳನ್ನ ಬೇರೆ ಶಾಲೆಗೆ ಸೇರಿಸಲು ಅವಕಾಶ ನೀಡಲಾಗಿದ್ದು ತಾವು ಹೇಳಿದ ಶಾಲೆಗೆ ಸರ್ಕಾರದಿಂದಲೇ ದರ ನಿಗದಿ ಮಾಡಿ ಸೀಟ್ ವ್ಯವಸ್ಥೆ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಜ್ಞಾನ ದೇಗುಲದಲ್ಲೇ ಪೈಶಾಚಿಕ ಕೃತ್ಯ;
ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ. 10 ವರ್ಷದ ಬಾಲಕಿ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ಆಗಸ್ಟ್ 3 ರ ಬೆಳಗ್ಗೆ 8.30 ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ.11.30 ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದ್ದ. ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ಪುಟ್ಟ ಬಾಲಕಿ ವಿವರಿಸಿದ್ದಾಳೆ. ಘಟನೆ ಸಂಬಂಧ ಬಾಲಕಿ ತಾಯಿ ದೂರಿನ ಮೇರೆಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಆರೋಪಿ ಪ್ರಾಂಶುಪಾಲನನ್ನ ಬಂಧಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಈಗ ಶಾಲೆಗೆ ಬೀಗ ಬಿದ್ದಿದೆ.
The school of principal Lambert Pushparaj, who was accused of sexually assaulting a girl in Varthur police station limits, has been locked. The school was closed on the orders of the block education officer as the school was constructed unauthorisedly. The future of more than 140 students studying in the school is uncertain.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm