ಬ್ರೇಕಿಂಗ್ ನ್ಯೂಸ್
17-08-23 05:19 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 17: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ವಲಯದ ಪ್ರದೇಶದಲ್ಲಿ ನಿಯಮಗಳನ್ನು ಉಲ್ಲಂಘಿಸಿ ಬೃಹತ್ ಕಟ್ಟಡ ಕಟ್ಟುತ್ತಿರುವ ಚಿತ್ರನಟ ಗಣೇಶ್‌ಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದ್ದು ತಕ್ಷಣ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿ ಗ್ರಾಮದ ಸರ್ವೆ ನಂಬರ್ 105ರಲ್ಲಿ ಗಣೇಶ್ ಅವರು 1 ಎಕರೆ 24 ಗುಂಟೆ ಜಮೀನು ಹೊಂದಿದ್ದಾರೆ. ಮನೆ ಹಾಗೂ ತೋಟಗಾರಿಕೆ ಉದ್ದೇಶಕ್ಕೆ ತಾತ್ಕಾಲಿಕ ಕಟ್ಟಡ ನಿರ್ಮಾಣಕ್ಕೆ ಬಂಡೀಪುರ ಪರಿಸರ ಸೂಕ್ಷ್ಮ ವಲಯ ಮೇಲ್ವಿಚಾರಣಾ ಸಮಿತಿಯಿಂದ ಅನುಮತಿ ಪಡೆದಿದ್ದರು. ಆದರೆ, ಅವರು ಬೃಹತ್ ಕಟ್ಟಡ ನಿರ್ಮಿಸಲು ಸಿದ್ಧತೆ ಮಾಡಿಕೊಂಡಿರುವುದು ಕಂಡುಬಂದಿದೆ. ದೊಡ್ಡ ಕಾಂಕ್ರೀಟ್ ಪಿಲ್ಲರ್‌ಗಳನ್ನು ಜಮೀನಿನಲ್ಲಿ ಹಾಕಲಾಗುತ್ತಿದ್ದು ಪರಿಸರ ಪ್ರೇಮಿಗಳು ಆಕ್ಷೇಪ ಸೂಚಿಸಿದ್ದಾರೆ.
ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ಇಲ್ಲ. ಗಣೇಶ್ ನಿರ್ಮಿಸುತ್ತಿರುವುದು ಶಾಶ್ವತ ಕಟ್ಟಡ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅರಣ್ಯ ಇಲಾಖೆ ಇದಕ್ಕೆ ಅವಕಾಶ ನೀಡಬಾರದು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ. ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪಿ.ರಮೇಶ್‌ಕುಮಾರ್ ಅವರಿಗೆ ವರದಿ ಸಲ್ಲಿಸಿದ್ದು, ಅದರ ಆಧಾರದಲ್ಲಿ ಗಣೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸೂಕ್ಷ್ಮ ವಲಯದ ಮೇಲ್ವಿಚಾರಣಾ ಸಮಿತಿಯ ಷರತ್ತುಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಜಾಗದ ಮಾಲೀಕ ಗಣೇಶ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಎಸಿಎಫ್ ವರದಿಯಲ್ಲಿ ತಿಳಿಸಿದ್ದಾರೆ.
Golden Star Ganesh gets notice For Building Residence In Eco Sensitive Zone at Bandipur National Park. Ganesh, a prominent figure in the Kannada film industry and fondly referred to as the Golden Star, has found himself entangled in a controversy due to construction activities near the ecologically sensitive Bandipur National Park.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm