ಬ್ರೇಕಿಂಗ್ ನ್ಯೂಸ್
24-08-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ಸಂಚಲನ ಎಬ್ಬಿಸಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಮರು ತನಿಖೆಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರು ತನಿಖೆಗೆ ಕೇಂದ್ರ ಸರ್ಕಾರಕ್ಕೇ ಮನವಿ ಸಲ್ಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಸಾಹಿತಿಗಳ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಈ ರೀತಿ ಹೇಳಿದ್ದಾರೆಂದು ವರದಿಯಾಗಿದೆ. ಪ್ರಗತಿಪರ ಸಾಹಿತಿಗಳು ಸೌಜನ್ಯಾ ಪ್ರಕರಣದಲ್ಲಿ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರೂ ಮುಖ್ಯಮಂತ್ರಿ ನಿಲುವು ಬೇರೆಯದೇ ಆಗಿರುವುದನ್ನು ತೋರಿಸಿದೆ.
ಸಾಹಿತಿಗಳ ಬೇಡಿಕೆಗೆ ಉತ್ತರಿಸಿದ ಸಿದ್ದರಾಮಯ್ಯ, ಸೌಜನ್ಯಾ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಕೋರಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣದ ಕುರಿತು ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಅಡ್ವಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಗೃಹ ಮಂತ್ರಿ ಪರಮೇಶ್ವರ್, ಸೌಜನ್ಯಾ ಪ್ರಕರಣ ಮುಗಿದ ಅಧ್ಯಾಯ ಎಂದು ಹೇಳುವ ಮೂಲಕ ಮರು ತನಿಖೆಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದಿದ್ದರು. ಕರಾವಳಿ ಭಾಗದಲ್ಲಿ ವ್ಯಾಪಕ ಜನಾಕ್ರೋಶ, ಮರು ತನಿಖೆ ಆಗ್ರಹಿಸಿ ರಾಜ್ಯದ ವಿವಿಧೆಡೆ ನಿರಂತರ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರ್ಕಾರ ಮಾತ್ರ ನಿರ್ಲಕ್ಷ್ಯ ಧೋರಣೆ ಅನುಸರಿಸಿದಂತೆ ತೋರುತ್ತಿದೆ.
ಪ್ರಕರಣ ದಾರಿ ತಪ್ಪಿಸುವ ತಂತ್ರಗಾರಿಕೆಯೇ ?
ನಿಜಕ್ಕಾದರೆ, ಸೌಜನ್ಯಾ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದರೂ, ಅಧಿಕಾರಿಗಳು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಆದರೆ ಆರೋಪಿಯ ಬಗ್ಗೆ ದೋಷಾರೋಪ ಸಾಬೀತು ಪಡಿಸಲು ವಿಫಲ ಆಗಿದ್ದರಿಂದ ಸಿಬಿಐ ವಿಶೇಷ ಕೋರ್ಟ್ ಖುಲಾಸೆ ಮಾಡಿತ್ತು. ಈ ನಡುವೆ, ಆರೋಪಿಯೆಂದು ಧರ್ಮಸ್ಥಳದ ಸಿಬಂದಿಯೇ ಆರೋಪಿಯನ್ನು ಹಿಡಿದು ಕೊಟ್ಟಿದ್ದು, ಪ್ರಕರಣದ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸದೇ ಇರುವುದು, ಆಗ ಇದ್ದ ಪೊಲೀಸ್ ಅಧಿಕಾರಿಗಳೇ ಪ್ರಕರಣವನ್ನು ಮುಚ್ಚಿ ಹಾಕಿದ್ದಾರೆನ್ನುವ ಆರೋಪ ಕೇಳಿಬರುತ್ತಿರುವುದರಿಂದ ರಾಜ್ಯ ಸರ್ಕಾರ ಪ್ರಕರಣದ ಬಗ್ಗೆ ಯಾವುದೇ ಸ್ವತಂತ್ರ ಆಯೋಗದಿಂದ ಮರು ತನಿಖೆ ನಡೆಸುವುದಕ್ಕೆ ಅವಕಾಶ ಇದೆ. ಸಿಬಿಐ ಅಧಿಕಾರಿಗಳೇ ಮರು ತನಿಖೆ ನಡೆಸಬೇಕೆಂದಿದ್ದರೆ, ಅದಕ್ಕೂ ಶಿಫಾರಸು ಮಾಡುವುದಕ್ಕೆ ರಾಜ್ಯ ಸರ್ಕಾರ ಸ್ವತಂತ್ರ ಇದೆ. ಈ ಬಗ್ಗೆ ಸೌಜನ್ಯಾ ಕುಟುಂಬಸ್ಥರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಮತ್ತೆ ಕುಟುಂಬಸ್ಥರೇ ಕೇಂದ್ರಕ್ಕೆ ಮನವಿ ಸಲ್ಲಿಸಬೇಕೆಂಬ ಮುಖ್ಯಮಂತ್ರಿ ಮಾತು ಕಾಲ ತಳ್ಳುವ ಮತ್ತು ಜನಾಕ್ರೋಶ ಕೇಂದ್ರಕ್ಕೆ ತಿರುಗುವಂತೆ ಪ್ರಯತ್ನದಂತೆ ಕಾಣುತ್ತಿದೆ. ಕಾನೂನು ಸುವ್ಯವಸ್ಥೆ ಜವಾಬ್ದಾರಿ, ಪ್ರಕರಣ ರಾಜ್ಯದ ವ್ಯಾಪ್ತಿಯಲ್ಲೇ ಬರುವುದರಿಂದ ಕೊಲೆ ಪ್ರಕರಣದ ಬಗ್ಗೆ ನ್ಯಾಯ ತೆಗೆಸಿಕೊಡುವುದು ರಾಜ್ಯ ಸರ್ಕಾರದ್ದೇ ಹೊಣೆಯಾಗಿರುತ್ತದೆ. ಇಲ್ಲಿ ಜನಾಕ್ರೋಶ ತಪ್ಪಿಸಲು ಮತ್ತು ಧರ್ಮಸ್ಥಳವನ್ನು ಎದುರು ಹಾಕ್ಕೊಳ್ಳುವುದು ಬೇಡ ಎನ್ನುವ ಕಾರಣಕ್ಕೋ ಏನೋ ಮುಖ್ಯಮಂತ್ರಿ ಪೆಟ್ಟು ತಪ್ಪಿಸುವ ಹೇಳಿಕೆ ನೀಡುತ್ತಿರುವಂತೆ ತೋರುತ್ತಿದೆ. ಈ ಹಿಂದೆ ಜನಾಗ್ರಹಕ್ಕೆ ಮಣಿದು ಪ್ರಕರಣವನ್ನು ರಾಜ್ಯ ಸರ್ಕಾರವೇ ಸಿಬಿಐ ತನಿಖೆಗೆ ವಹಿಸಿತ್ತು ಎನ್ನುವುದನ್ನು ಮರೆಯುವಂತಿಲ್ಲ.
ಈಗ ಮರು ತಬಿಖೆ ಆಗಬೇಕೆಂದು ಸೌಜನ್ಯಾ ಕುಟುಂಬಸ್ಥರು ಹೈಕೋರ್ಟಿಗೆ ಅಪೀಲು ಹೋಗಬಹುದು. ಅಥವಾ ಆರೋಪಿಯಾಗಿದ್ದ ಸಂತೋಷ್ ರಾವ್ ತನ್ನನ್ನು ವಿನಾಕಾರಣ ಪೊಲೀಸರು ಬಂಧನದಲ್ಲಿ ಇಟ್ಟಿದ್ದರೆಂದು ಪೊಲೀಸರ ವಿರುದ್ಧ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿ, ರಾಜ್ಯ ಸರ್ಕಾರದ ಬಳಿ ಪರಿಹಾರ ಮತ್ತು ನೈಜ ಆರೋಪಿಗಳ ಬಂಧನ ಆಗಬೇಕೆಂದು ಆಗ್ರಹ ಮಾಡಲೂಬಹುದು. ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯ ಪ್ರಕರಣವನ್ನು ಕೇಂದ್ರಕ್ಕೆ ಅಪೀಲು ಹೋಗಬೇಕೆಂದು ಹೇಳುವುದೇ ಜವಾಬ್ದಾರಿಯಿಂದ ನುಣುಚಿಕೊಳ್ಳುವ ತಂತ್ರಗಾರಿಕೆ ಅಷ್ಟೇ..
Karnataka Chief Minister Siddaramaiah has said that the state government is ready to write to the Centre for a re-investigation into the case of Soujanya, who was allegedly raped and murdered in Dharmasthala. Chief Minister Siddaramaiah held a meeting with writers at home office Krishna on Wednesday. The writers demanded that the soujanya case should be re-investigated and the guilty punished.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm