ಬ್ರೇಕಿಂಗ್ ನ್ಯೂಸ್
26-08-23 09:07 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 26; ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
Over a year after the “40 per cent commission” row erupted in Karnataka, the Congress-led state government, which came to power in May this year, has order a judicial probe into the matter.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am