ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm