ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm