ಬ್ರೇಕಿಂಗ್ ನ್ಯೂಸ್
31-08-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ನಾಲ್ಕು ಮತ ಸೆಳೆಯಲಾಗದ, ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ ವ್ಯಕ್ತಿ ಸಂತೋಷ್ ಸಭೆ ನಡೆಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಬಿಜೆಪಿ ಶಾಸಕರೆಲ್ಲ ಯಡಿಯೂರಪ್ಪ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ.ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!
ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ ಇದೇ ಸಂತೋಷ್ ಗಂಟು ಮೂಟೆ ಕಟ್ಟಿಕೊಂಡು ನಾಪತ್ತೆಯಾಗಿದ್ದರು, ಈಗ BSY ಅವರಿಗೆ ಸೆಡ್ಡು ಹೊಡೆಯಲು ಮತ್ತೆ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅದೇನೇ ಮಾಡಿದರೂ ಬಿಜೆಪಿಗೆ ಮತ್ತೆ ಜೀವ ಬರುವುದಿಲ್ಲ! ಎಂದು ಟೀಕಿಸಿ ಬರೆದಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸಭೆ ಕರೆಯಲು ಒಬ್ಬ ಅಧ್ಯಕ್ಷ ದಿಕ್ಕಿಲ್ಲ, ಬಿಜೆಪಿ ಶಾಸಕರ ಸಭೆ ನಡೆಸಲು ಒಬ್ಬ ಶಾಸಕಾಂಗ ಪಕ್ಷದ ನಾಯಕನಿಲ್ಲ. ಜನಪ್ರತಿನಿಧಿಯಾಗಲು ಅರ್ಹತೆ ಇಲ್ಲದ, ನಾಲ್ಕು ಮತಗಳನ್ನು ಸೆಳೆಯಲು ಶಕ್ತಿ ಇಲ್ಲದ ಬಿ.ಎಲ್ ಸಂತೋಷ್ ಸಭೆ ನಡೆಸುವ ದುರ್ಗತಿ ಬಂದಿದೆ ಎಂದರೆ ಬಿಜೆಪಿ ಅದೆಷ್ಟು ರಾಜಕೀಯ ದಿವಾಳಿಯಾಗಿರಬಹುದು! ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವುದಕ್ಕೆ ಮಾತ್ರ ಈ ಸಭೆ ಸೀಮಿತವಾಗಿದೆ.
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡಲು ಸಭೆ ನಡೆಸಬೇಕಿತ್ತು, ನೂತನ ರಾಜ್ಯಾಧ್ಯಕ್ಷರ ನೇಮಕಕ್ಕಾದರೂ ಸಭೆ ನಡೆಸಬೇಕಿತ್ತು. ಆದರೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಯ ಹಪಹಪಿಯನ್ನು ಸಂತೈಸಲು ಸಭೆ ನಡೆಸಿದೆ!
ಬಿಜೆಪಿಯ ಅಸಮಧಾನಿತರು ಈ ಸಭೆಯಿಂದ ದೂರ ಉಳಿಯುವ ಮೂಲಕ #BJPvsBJP ಕಿತ್ತಾಟ ಮತ್ತೊಮ್ಮೆ ಬಹಿರಂಗವಾಗಿದೆ ಹಾಗೂ @blsanthosh ಅವರಿಗೆ ನಯಾಪೈಸೆ ಕಿಮ್ಮತ್ತಿಲ್ಲ ಎಂಬುದನ್ನು ಅನಾವರಣಗೊಳಿಸಿದೆ ಎಂದಿದೆ.
ಬಿಜೆಪಿ ಬೆಂಗಳೂರು ಕಚೇರಿಯಲ್ಲಿ ಸಂತೋಷ್ ಸಭೆ ನಡೆಸಿರುವುದನ್ನು ಬಿಜೆಪಿ ಫೋಟೊ ಸಹಿತ ಟ್ವೀಟ್ ಮಾಡಿತ್ತು. ಅದರ ಬೆನ್ನಲ್ಲೇ ಅದೇ ಫೋಟೊ ಮುಂದಿಟ್ಟು ಕಾಂಗ್ರೆಸ್ ಟ್ವೀಟ್ ನಲ್ಲೇ ತಿವಿದಿದೆ.
ಇತ್ತೀಚಿಗೆ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ಮನೆಯಲ್ಲಿ ಸಭೆ ಸೇರಿ ನೀವೇ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದರು.
— Karnataka Congress (@INCKarnataka) August 31, 2023
ಬಿಜೆಪಿ ಶಾಸಕರೆಲ್ಲ @BSYBJP ಅವರ ಹಿಂದೆ ಹೋಗಿದ್ದೇ ತಡ ಕುಪಿತರಾದ ಬಿ ಎಲ್ ಸಂತೋಷ್ ನಾನೇ ಲೀಡರ್ ಎಂಬ ಸಂದೇಶ ರವಾನಿಸಲು ಸಭೆ ನಡೆಸಿದ್ದಾರೆ!
ಚುನಾವಣೆಯ ತಂತ್ರಗಾರಿಕೆ ಮಕಾಡೆ ಮಲಗಿ ಹೀನಾಯ ಸೋಲು ಅನುಭವಿಸಿದಾಗ…
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮತದಾರ ಚೇತನ ಮಹಾಭಿಯಾನದ ನಿಮಿತ್ತ ಇಂದು ನಡೆದ ಲೋಕಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಕಾರ್ಯಾಗಾರದ ಸಮಾರೋಪವನ್ನು ಉದ್ದೇಶಿಸಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh ಅವರು ಮಾತನಾಡಿದರು. pic.twitter.com/GIAYQhaHzh
— BJP Karnataka (@BJP4Karnataka) August 31, 2023
Congress Critisize BJP over BL Santosh Meeting and Discribe Meeting is just to Fight Agaisnt BS Yediyurappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am