ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm