ಬ್ರೇಕಿಂಗ್ ನ್ಯೂಸ್
07-09-23 07:07 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ 07: ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.
ಕಾವಲ್ ದುಗ್ಲಾಪುರ ಗೇಟ್ ಮಾರ್ಗವಾಗಿ ಅತಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಘಟನೆಯಲ್ಲಿ ತುಳಸಿ (15) ಮೃತಪಟ್ಟಿದ್ದಾಳೆ. ಇನ್ನು ನಿವೇದಿತ (14) ಸ್ಥಿತಿ ಗಂಭೀರವಾಗಿದ್ದು, ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.


ವಿದ್ಯಾರ್ಥಿಗಳ ಮೇಲೆ ಹರಿದ ಬಸ್ ಕೊನೆಗೆ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಮೇಲ್ಚಾವಣಿ ಸಂಪೂರ್ಣ ಜಖಂಗೊಂಡಿದೆ. ಗಂಭೀರ ಗಾಯಗೊಂಡಿರುವ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನಿಸಲಾಗಿದೆ.
ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದ ಬಸ್ ಹಾನಿ ಮಾಡಿದೆ. ಚಾಲಕನ ನಿಯಂತ್ರಣ ತಪ್ಪಿ ಹೋಗಿರುವುದರಿಂದ ಈ ರೀತಿ ಅವಘಡವಾಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಆಕ್ರೋಶಗೊಂಡ ಸ್ಥಳೀಯರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಖಾಸಗಿ ಬಸ್ ನಿರ್ವಾಹಕರು ಅತಿವೇಗದ ಹಾಗೂ ಅಪಾಯಕಾರಿಯಾಗಿ ಚಾಲನೆ ಮಾಡುತ್ತಿರುವುದನ್ನು ಅಧಿಕಾರಿಗಳು ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
Chikkamagaluru Bus Accident, one school student killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am