ಬ್ರೇಕಿಂಗ್ ನ್ಯೂಸ್
08-09-23 05:43 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಕಾ ಆಗಿದೆ. ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ ಬಿಎಸ್ ವೈ, ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.

ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.
ಮೈತ್ರಿ ಬಹಳ ಮುಖ್ಯ
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಬಲವಾಗಿ ಹೋರಾಡಲು ವಿಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ನಾವು ಒಗ್ಗಟ್ಟಾಗಿ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 20 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆ ಮುಂದಿನ ಚುನಾವಣೆಯಲ್ಲಿ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರ ಕೋರ್ಟ್ ಕೇಸ್ ಸಂಬಂಧಿಸಿ ವಕೀಲರ ಭೇಟಿಗೆ ದೆಹಲಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
In what comes as official confirmation after months of discussions and hints, former Karnataka chief minister BS Yediyurappa made a crucial announcement regarding the 2024 Lok Sabha elections on Friday, 8 September. The Lingayat strongman said the BJP was forming an alliance with the JD(S) in Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am