ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.
ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm