ಬ್ರೇಕಿಂಗ್ ನ್ಯೂಸ್
13-09-23 04:45 pm HK News Desk ಕರ್ನಾಟಕ
ಶಿವಮೊಗ್ಗ, ಸೆ.13: ಚೈತ್ರಾ ಕುಂದಾಪುರ ವಂಚನೆ ಮಾಡಿದ್ರೆ ಕಾನೂನು ಕ್ರಮ ಆಗಲಿ. ಆದರೆ, ಅನವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಸಹಿಸಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಚೈತ್ರಾ ಕುಂದಾಪುರ ಬಂಧನದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತಪ್ಪಿದ್ದರೆ ಕ್ರಮ ಕೈಗೊಳ್ಳಲಿ. ಆದರೆ, ಅನಗತ್ಯವಾಗಿ ಹಿಂದೂ ಪರ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ. ಅವರನ್ನು ಆಧಾರ ರಹಿತವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರಾ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಸಚಿವ ಡಿ ಸುಧಾಕರ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸುಧಾಕರ್‌ಗೆ ಒಂದು ಕಾನೂನು, ಬೇರೆಯವರಿಗೊಂದು ಕಾನೂನು ಇಲ್ಲ. ಕಾನೂನಿಗೆ ವಿರುದ್ಧವಾಗಿದ್ದರೆ ಸುಧಾಕರ್ ಮೇಲೆ ಕ್ರಮ ಆಗಲಿ, ವಿಚಾರಣೆ ಆಗಲಿ, ಸತ್ಯಾಸತ್ಯತೆ ಹೊರಬರಲಿ. ಸುಧಾಕರ್ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿರುವುದು ಗೊತ್ತಿಲ್ಲ. ದಲಿತರಿಗೆ ದೌರ್ಜನ್ಯ, ಅನ್ಯಾಯ ಆಗಬಾರದು ಎಂದು ಹೇಳಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಮಲೆನಾಡಿನಲ್ಲಿ ಇಷ್ಟು ಮಳೆ ಕಡಿಮೆಯಾಗಿರುವುದು ನನ್ನ ಜೀವನದಲ್ಲಿ ನಾನು ನೋಡಿರಲಿಲ್ಲ. ಜಮೀನಿನಲ್ಲಿ ಅರ್ಧಂಬರ್ಧ ನಾಟಿಯಾಗಿದೆ. ಇನ್ನೆರಡು ತಿಂಗಳಲ್ಲಿ ನೀರಿನ ಅಭಾವ ಸಹ ತಲೆದೋರಲಿದೆ. ತೀರ್ಥಹಳ್ಳಿ, ಹೊಸನಗರ ಸೇರಿ ಉಳಿದ ತಾಲೂಕುಗಳಲ್ಲೂ ಮಳೆ ಕೊರತೆಯಾಗಿದೆ. ತಕ್ಷಣವೇ ಬರ ಘೋಷಣೆ ಮಾಡಬೇಕು. ಇದಕ್ಕೆ ಮೀನಾಮೇಷ ಎಣಿಸಬಾರದು ಎಂದು ಆಗ್ರಹಿಸಿದರು.
ಅತಿವೃಷ್ಟಿಯಾದಾಗ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟು ಸಾಂತ್ವನ ಹೇಳಿದ್ದೇವು. ಅದೇ ರೀತಿ ಬರಗಾಲದ ಈ ಸಂದರ್ಭದಲ್ಲಿ ಸರ್ಕಾರ ಜನರ ನೆರವಿಗೆ ಧಾವಿಸಬೇಕು. ರೈತರಿಗೆ ಬೀಜದ ಭತ್ತ, ಗೊಬ್ಬರ ನೀಡಬೇಕು. ಈಗ ಹಾಕಿರುವ ಎಲ್ಲವೂ ನಾಶವಾಗಿದೆ, ಭೂಮಿ ಬಾಯಿ ಬಿಟ್ಟಿದೆ. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸಿದಂತೆ ಕಾಣುವುದಿಲ್ಲ. ಅಧಿಕಾರಕ್ಕೆ ಬಂದ ನಾಲ್ಕು ತಿಂಗಳಾದರೂ ಆಡಳಿತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ರೈತರು ಬೇರೆ ದಾರಿ ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭತ್ತಕ್ಕೆ ಬೆಲೆ ಇದ್ದರೂ ಬೆಳೆಯಲಾಗುತ್ತಿಲ್ಲ. ಬೋರ್‌ವೆಲ್‌ನಿಂದ ನೀರು ಹರಿಸಲೂ ವಿದ್ಯುತ್ ಇಲ್ಲ ಎಂದರು.
Hindutva activist Chaitra Kundapura arrested, former Home Minister Araga Jnanendra slams arrest of Chaitra. Bengaluru Central Crime Branch police arrested right-wing activist Chaitra Kundapura from Udupi on September 12, on the charge of cheating a businessperson after promising to get him the BJP ticket for Byndoor Assembly constituency.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm