ಬ್ರೇಕಿಂಗ್ ನ್ಯೂಸ್
14-09-23 02:38 pm HK News Desk ಕರ್ನಾಟಕ
ಬೆಂಗಳೂರು, ಸೆ.14: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ.
ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಅವರ ಜೊತೆಗೆ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ;
ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಚೈತ್ರಾ ಕುಂದಾಪುರರನ್ನು ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಾಗ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ, ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿಯಿದೆ.
On Thursday, arrested Hindu activist Chaitra Kundapura claimed that big personalities were involved in the BJP ticket scam in Karnataka. She made the remarks to media persons while being taken for interrogation at the City Central Crime Branch (CCB) building here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am