ಬ್ರೇಕಿಂಗ್ ನ್ಯೂಸ್
15-09-23 03:08 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸುಳ್ಳು ಸುದ್ದಿಗಳ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಸಮಿತಿಯನ್ನು ಆರಂಭಿಸಲಾಗುವುದು. ಹಾಗೆಂದು ನಾವು ಮಾಧ್ಯಮಗಳನ್ನು ನಿಯಂತ್ರಣದಲ್ಲಿಡಲು ಹೊರಟಿಲ್ಲ. ಈ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.
ಸುಳ್ಳು ಸುದ್ದಿ ಪ್ರಸಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇದಕ್ಕಾಗಿ ಈ ರೀತಿಯ ವ್ಯವಸ್ಥೆಯನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಅದಕ್ಕಾಗಿ ಪ್ರತ್ಯೇಕ ಫ್ಯಾಕ್ಟ್ ಚೆಕ್ ಸಮಿತಿ ಎನ್ನುವ ತಂಡ ರಚನೆ ಮಾಡಲಿದ್ದೇವೆ. ಹಾಗೆಂದು ಯಾವುದೇ ರಾಜಕೀಯ ದ್ವೇಷ ಮಾಡೋದಿಲ್ಲ. ಮಾಧ್ಯಮಗಳನ್ನು ನಿಯಂತ್ರಣ ಮಾಡಲು ಹೊರಟಿಲ್ಲ ಎಂದು ಸಚಿವರು ಹೇಳಿದರು.
ಫ್ಯಾಕ್ಟ್ ಚೆಕಿಂಗ್ ತಂಡ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲನೆ ನಡೆಸಲಿದೆ. ಸುಳ್ಳು ಸುದ್ದಿಯ ಮೂಲ ಪತ್ತೆಗೆ ಕೆಲಸ ಮಾಡಲಿದೆ. ವಿಶ್ಲೇಷಣಾ ತಂಡ ಸುಳ್ಳು ಮಾಹಿತಿಯ ಸೃಷ್ಟಿಯ ಬಗ್ಗೆ ಹಾಗೂ ಇದರ ಪರಿಣಾಮದ ಬಗ್ಗೆ ನಿಗಾ ಇಡಲಿದೆ. ಸುಳ್ಳು ಸುದ್ದಿಯ ಬಗ್ಗೆ ಪೂರ್ವ ಮಾಹಿತಿಯನ್ನು ನೀಡಲಿದೆ.
ಸಾಮರ್ಥ್ಯ ಬಲವರ್ಧನೆ ತಂಡ, ಸುಳ್ಳು ಸುದ್ದಿಯ ಬಗ್ಗೆ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಲಿದೆ. ಈ ಎಲ್ಲಾ ತಂಡಗಳ ಕಾರ್ಯ ನಿರ್ವಹಣೆಯನ್ನು ಮೇಲುಸ್ತುವಾರಿ ಸಮಿತಿ ವಹಿಸಲಿದೆ.
ಸಾರ್ವಜನಿಕರು ಸುಳ್ಳು ಸುದ್ದಿಯ ಬಗ್ಗೆ ನೇರವಾಗಿ ಈ ಕಮಿಟಿಗೆ ದೂರು ನೀಡಬಹುದು. ಫ್ಯಾಕ್ಟ್ ಚೆಕ್ ಏಜೆನ್ಸಿಗಳು ಸುಳ್ಳು ಸುದ್ದಿಯ ಬಗ್ಗೆ ಪರಿಶೀಲನೆ ನಡೆಸಲಿದೆ. ದೂರು ಸಲ್ಲಿಕೆಯಾದ ಕೂಡಲೇ ಫ್ಯಾಕ್ಟ್ ಚೆಕ್ ಸಮಿತಿ ಪ್ರಾಥಮಿಕ ಪರಿಶೀಲನೆ ನಡೆಸಲಿದೆ. ಈ ಮಾಹಿತಿಯ ಸಾರ್ವಜನಿಕ ವಲಯದಲ್ಲಿ ಲಭ್ಯವಿದೆಯೇ ಎಂದು ಪರಿಶೀಲನೆ ನಡೆಸಲಿದೆ. ಮೊದಲ ಹಂತದ ವಿಶ್ಲೇಷಣೆ ಬಳಿಕ ಅಂತಿಮ ವರದಿಯನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಮೇಲುಸ್ತುವಾರಿ ಸಮಿತಿ ವಿಶ್ಲೇಷಣೆ ಮಾಡಲಿದೆ. ಸುಳ್ಳು ಸುದ್ದಿಯ ವಿರುದ್ಧ ಕಾನೂನು ಕ್ರಮದ ಅಗತ್ಯವಿದ್ದರೆ ಪೊಲೀಸ್ ದೂರು ದಾಖಲಿಸಲಿದೆ. ಐಟಿ ಬಿಟಿ ಇಲಾಖೆಯ ಮುಖ್ಯಸ್ಥರು, ಎಡಿಜಿಪಿ ( ಗುಪ್ತಚರ), ಆಡಳಿತ ಹಾಗೂ ಸಿಬ್ಬಂದಿ ಸುಧಾರಣೆ ಅಧಿಕಾರಿ, ಕರ್ನಾಟಕ ನಾವಿನ್ಯ ಹಾಗೂ ತಂತ್ರಜ್ಞಾನ ಸೊಸೈಟಿ ( ಕೆಐಡಿಎಸ್) ಎಂಡಿ, ಐಐಎಸ್ ಸಿ ಡೀನ್, ಹೆಚ್ಚುವರಿ ಅಡ್ವಕೇಟ್ ಜನರಲ್ ಹಾಗೂ ಸಿವಿಕ್ ಸೊಸೈಟಿ ಪ್ರತಿನಿಧಿಗಳು ಈ ತಂಡದಲ್ಲಿ ಇರಲಿದ್ದಾರೆ.
The state government on Thursday announced the framework for a fact-checking unit, which is proposed to be set up to tackle fake news and misinformation. In cases of misinformation, disinformation and misinformation (MDM), the government will initiate legal action under the provisions of the Information Technology Act, IPC, or Disaster Management Act, 2005.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm