ಬ್ರೇಕಿಂಗ್ ನ್ಯೂಸ್
15-09-23 05:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?:
ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
Police department E FIR first time in Karnataka inaugurated by CM Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am