ಬ್ರೇಕಿಂಗ್ ನ್ಯೂಸ್
15-09-23 09:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಚೈತ್ರಾ ಕುಂದಾಪುರ ಬಾಯಲ್ಲಿ ನೊರೆ ಬಂದ ರೀತಿ ಕುಸಿದು ಬಿದ್ದು ಅಧಿಕಾರಿಗಳನ್ನೇ ಅಚ್ಚರಿಗೆ ನೂಕಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದಾಗ, ಚೈತ್ರಾಗೆ ಪಿಟ್ಸ್ ಆಗಲೀ, ಬೇರಾವುದೇ ಸಮಸ್ಯೆ ಆಗಲೀ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಬಟ್ಟೆ ತೊಳೆಯಲು ಕೊಟ್ಟ ಸಾಬೂನಿನ ನೊರೆಯನ್ನೇ ಬಾಯಿಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮುನ್ನೆಚ್ಚರಿಕೆ ಸಲುವಾಗಿ ಚೈತ್ರಾ ಕುಂದಾಪುರ ಅವರ ಆರೋಗ್ಯವನ್ನು ಎಲ್ಲಾ ರೀತಿಯಲ್ಲಿ ತಪಾಸಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅದರಂತೆ, ಬಿಪಿ, ಪಲ್ಸ್ ರೇಟ್ ನಾರ್ಮಲ್ ಇದೆ. ಅದರೂ ಮೂರ್ಛೆ ರೋಗಕ್ಕೆ ಸಂಬಂಧಿಸಿದ ತಪಾಸಣೆಗಳು, ಬಿಪಿ, ಹೃದಯ ಸಂಬಂಧಿ ಚೆಕಪ್, ಉಸಿರಾಟ ಸಮಸ್ಯೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವೈದ್ಯರ ತಪಾಸಣೆ ವೇಳೆ ಪಿಡ್ಸ್ ಅಥವಾ ಮೂರ್ಛೆ ರೋಗಕ್ಕೆ ಸಂಬಂಧಿಸಿದ ಯಾವುದೇ ಕುರುಹು ಕಂಡುಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಇನ್ನೂ ಕೆಲಕಾಲ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸಲು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಆಗಿದ್ದ ಘಟನೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚೈತ್ರಾ ಕುಂದಾಪುರ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಆಸ್ಪತ್ರೆ ವೈದ್ಯೆ ಡಾ.ಅಸೀಮಾ ಬಾನು, ಚೈತ್ರಾ ಆರೋಗ್ಯ ಸ್ಥಿರವಾಗಿದೆ. ಸಿಟಿ ಸ್ಕ್ಯಾನ್, ಇಸಿಜಿ ರಿಪೋರ್ಟ್ ನಾರ್ಮಲ್ ಇದೆ. ಎಲ್ಲಾ ಟೆಸ್ಟ್ನಲ್ಲೂ ನಾರ್ಮಲ್ ಇದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೂರ್ಛೆ ರೋಗ ಇರಲಿಲ್ಲ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದಿದ್ದಾರೆ. ಹೀಗಿದ್ದರೂ, ಚೈತ್ರಾ ತನಗೆ ಮಾತು ಬಾರದ ರೀತಿ ಆಸ್ಪತ್ರೆಯಲ್ಲಿ ನಾಟಕವಾಡಿದ್ದಾರೆ. ಯಾವುದಕ್ಕೂ ಮಾತನಾಡಲು ಆಗಲ್ಲ ಎಂದು ಕೈಸನ್ನೆ ಮಾಡುತ್ತಿದ್ದಾರಂತೆ. ಇದರಿಂದ ವೈದ್ಯರು ಮತ್ತು ಪೊಲೀಸರು ಕೂಡ ರೋಸಿ ಹೋಗಿದ್ದಾರೆ.
Chaitra Kundapura normal in hospital, doctors state she drank soap water, drama at hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am