ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.
ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
31-08-25 05:35 pm
HK News Desk
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 01:56 pm
Mangaluru Correspondent
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm