ಬ್ರೇಕಿಂಗ್ ನ್ಯೂಸ್
22-09-23 02:38 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.22: ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡುತ್ತಿರುವುದು, ಮೈತ್ರಿ ಮಾತುಕತೆ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೈತ್ರಿ ವಿಚಾರ ಮುಂದಿಟ್ಟು ಕಾಂಗ್ರೆಸ್ ನಾಯಕರಿಗೆ ಕುಟುಕಿದೆ. 'ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಾಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ! ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ ಎಂದಿದೆ.
'ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನ ವಿಸರ್ಜಿಸಿವುದೇ ಉತ್ತಮ!' ಎಂದು ಜೆಡಿಎಸ್ & ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಮೂಲಕ ಬಿಜೆಪಿ & ಜೆಡಿಎಸ್ ಮೈತ್ರಿ ವಿಚಾರವನ್ನೇ ಮುಂದಿಟ್ಟು, ಹೊಸ ಅಸ್ತ್ರ ಪ್ರಯೋಗಿಸಲು ಕರ್ನಾಟಕ ಕಾಂಗ್ರೆಸ್ ಘಟಕ ಮುಂದಾಗಿದೆ.
ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಬಗ್ಗೆ ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಜೆಡಿಎಸ್ & ಬಿಜೆಪಿ ಮಧ್ಯೆ ಮೈತ್ರಿ ಸಕ್ಸಸ್ ಆದರೆ, ಕೆಲವು ಸ್ಥಾನಗಳನ್ನು ಬಿಜೆಪಿ ಬಿಟ್ಟುಕೊಡಲಿದೆ. ಹೊಂದಾಣಿಕೆಯ ಪೈಕಿ ಹಳೇ ಮೈಸೂರು ಭಾಗದಲ್ಲೇ ಜೆಡಿಎಸ್‌ಗೆ ಹೆಚ್ಚಿನ ಸ್ಥಾನ ಸಿಗುವ ನಿರೀಕ್ಷೆ ಇದೆ. ಈಗಿರುವ ಚರ್ಚೆ ಪ್ರಕಾರ, ಸುಮಾರು 4 ಲೋಕಸಭೆ ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಬಹುದು. ಇನ್ನುಳಿದ 24 ಸ್ಥಾನದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಬಹುದು.
ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲೊಪ್ಪದ ಬಿಜೆಪಿಯ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ.
— Karnataka Congress (@INCKarnataka) September 21, 2023
A ಟೀಮ್ ಗಿಂತ B ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ @BJP4Karnataka?
ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿಯವರ ಜೊತೆಗೆ ಹೋಗಿದ್ದಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು, ವಿರೋಧ ಪಕ್ಷದ ನಾಯಕನ…
JD(S) leader H D Kumaraswamy on Wednesday said he will be travelling to New Delhi on September 21 to meet BJP central leadership to discuss the possible alliance between both parties in Karnataka for 2024 Lok Sabha polls.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm