ಬ್ರೇಕಿಂಗ್ ನ್ಯೂಸ್
23-09-23 07:45 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ಅಕ್ಟೊಬರ್ 6 ರ ವರೆಗೆ ವಿಸ್ತರಿಸಿದೆ.
ಚೈತ್ರಾ ಜತೆಗೆ ಇತರ ಪ್ರಮುಖ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪೊಲೀಸ್ ಕಸ್ಟಡಿ ಅಂತ್ಯಗೊಂಡ ಕಾರಣ ಶನಿವಾರ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು.
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಮತ್ತು ಇತರ ಎಂಟು ಮಂದಿ ವಿರುದ್ಧ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಮತ್ತು ಆಕೆಯ ಸಹಚರರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿಸಿ ಕೊಡುವ ನೆಪದಲ್ಲಿ 5 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.
ಚೈತ್ರಾ ಮತ್ತು ತಂಡ ಸಿಸಿಬಿ ತನಿಖಾಧಿಕಾರಿ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಚೈತ್ರಾ ಸಹಿತ ಎಲ್ಲರ ಹೇಳಿಕೆಗಳನ್ನೂ ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ. ಇಡೀ ವಂಚನೆಯ ಸಂಚನ್ನು ಗಗನ್, ಹಾಲಶ್ರೀ ಸ್ವಾಮೀಜಿ, ಶ್ರೀಕಾಂತ್ ಪೂಜಾರಿ ಹಾಗೂ ತಾನು ಸೇರಿ ರೂಪಿಸಿದ್ದು, ಇತರರಿಗೆ ಹಣದ ಆಮಿಷವೊಡ್ಡಿ ಸಹಾಯ ಪಡೆದುಕೊಂಡಿದ್ದೇವೆ ಅಷ್ಟೇ ಎಂದು ಚೈತ್ರಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಮತ್ತೆ ಕಣ್ಣೀರು!
ಚೈತ್ರಾ ಕುಂದಾಪುರ ಅವರನ್ನು ಮೊದಲ ಬಾರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಸಂದರ್ಭದಲ್ಲಿ ಪೊಲೀಸರ ಮೇಲೆ ದೂರು ಹೇಳಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ್ದರು. ಈ ಬಾರಿ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು.
Chaitra Kundapura, six others sent to judicial custody till October 6th. Chaitra Kundapura and six accused in the sensational BJP MLA cash-for-ticket scam were sent to judicial custody till October 6 by the Third Additional Chief Metropolitan Magistrate Court in Bengaluru on Saturday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm