ಬ್ರೇಕಿಂಗ್ ನ್ಯೂಸ್
23-09-23 09:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.23: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಹೆಸರಿನ ಜೊತೆಗೆ ‘ಕುಂದಾಪುರ’ ಎಂಬ ಸ್ಥಳನಾಮ ಬಳಸದಂತೆ ಬೆಂಗಳೂರು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಆರೋಪಿ ಜೊತೆಗಿನ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಜೊತೆಗೆ ಥಳುಕು ಹಾಕಿದ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಅಲ್ಲಿನ ನಿವಾಸಿಗಳ, ಸ್ಥಳೀಯರ ಭಾವನೆಗೆ ಧಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಕೋರ್ಟ್ ತಡೆಯಾಜ್ಞೆ ವಿಧಿಸಿದ್ದು, ಹೆಸರಿನ ಜೊತೆಗೆ ಸ್ಥಳನಾಮ ಬಳಸದಂತೆ ಸಮನ್ಸ್ ನೀಡಿದೆ, ಅಲ್ಲದೆ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಕಾಯ್ದಿರಿಸಿದೆ. ಈ ಬಗ್ಗೆ ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
Chaitra Kundapura case, Court issues order not to use the name of the place Kundapura
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am