ಬ್ರೇಕಿಂಗ್ ನ್ಯೂಸ್
30-09-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30: ತಮಿಳುನಾಡಿಗೆ ನೀರು ಬಿಡಬಾರದು ಎಂಬ ರೈತರ ಒತ್ತಾಯವನ್ನು ರಾಜ್ಯ ಸರ್ಕಾರವೂ ಒಪ್ಪುತ್ತದೆ. ಆದರೆ ಹಾಗೆ ಮಾಡೋದು ನ್ಯಾಯಾಂಗ ನಿಂದನೆಯಾಗುತ್ತದೆ. ಅದರ ಪರಿಣಾಮ ರಾಜ್ಯ ಸರ್ಕಾರವನ್ನು ವಜಾಗೊಳಿಸುವುದಕ್ಕೆ ಕಾರಣವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಜಲಸಂರಕ್ಷಣಾ ಸಮಿತಿ, ರೈತ ಸಂಘಗಳು ಸೇರಿದಂತೆ ಸಂಘಟನೆಗಳ ಸದಸ್ಯರಿಗೆ ಸರ್ಕಾರದ ಸ್ಥಿತಿಯ ಬಗ್ಗೆ ವಿವರಿಸಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯದ ಜಲಾಶಯಗಳ ಮೇಲೆ ಕೇಂದ್ರವು ನಿಯಂತ್ರಣ ಸಾಧಿಸಬಹುದು ಎಂದರು. ಆಗಸ್ಟ್‌ನಲ್ಲಿ ಮಳೆ ಕೊರತೆಯಾಗಿ ಸಮಸ್ಯೆಯಾಗಿದೆ. ಈ ತಿಂಗಳಲ್ಲಿಯೂ ರಾಜ್ಯದಲ್ಲಿ ಕಡಿಮೆ ಮಳೆಯಾಗಿದೆ. ನಾವು ಈ ವಿಷಯವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಸಭೆಗಳಲ್ಲಿ ಪ್ರಸ್ತಾಪಿಸಿದ್ದೇವೆ. ಕಾವೇರಿ ಜಲಾನಯನ ಪ್ರದೇಶದ ನಮ್ಮ ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿಲ್ಲ. ಸುಪ್ರೀಂ ಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಹೇಳಿದರು.
ರಾಜ್ಯಕ್ಕೆ ನೀರಾವರಿಗೆ 70 ಟಿಎಂಸಿ, ಕುಡಿಯುವ ಉದ್ದೇಶಕ್ಕೆ 30 ಟಿಎಂಸಿ ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ಒಟ್ಟಾರೆಯಾಗಿ, ರಾಜ್ಯಕ್ಕೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮಲ್ಲಿ 50 ಟಿಎಂಸಿ ನೀರು ಮಾತ್ರ ಇದೆ. ಜನರ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.
ಅಕ್ಟೋಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಸಿಡಬ್ಲ್ಯೂಎಂಎ ನಿರ್ದೇಶನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ರೈತರ ನಿಯೋಗವು ಕಾನೂನು ತಜ್ಞರೊಂದಿಗಿನ ಸಭೆಯ ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಸಮಿತಿ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.
ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಮತ್ತು ಸಂಕಷ್ಟ ಸೂತ್ರದ ಕುರಿತು ಎಲ್ಲಾ ಪಾಲುದಾರರು ಒಮ್ಮತಕ್ಕೆ ಬರುವವರೆಗೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೇಂದ್ರಕ್ಕೆ ಕಳುಹಿಸಬೇಕು ಎಂದು ರೈತರು ಸರ್ಕಾರಕ್ಕೆ ಮನವಿ ಮಾಡಿದರು.
Chief Minister Siddaramaiah on Friday said the State Government agrees with farmers’ view not to release water to TN, but that can amount to contempt of court and lead to dismissal of the government. Explaining the government’s predicament to members of the Karnataka Jalasamrakshana Samithi — a group of organisations, including farmers’ associations, the CM said if water is not released to TN, the Centre can take control of the State’s reservoirs.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm